ಹಬ್ಬಕ್ಕೆಂದು ತವರು ಮನೆಗೆ ಬಂದು 5 ದಿನಗಳಿಂದ ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ

ಹಬ್ಬಕ್ಕೆಂದು ತವರು ಮನೆಗೆ ಬಂದು 5 ದಿನಗಳಿಂದ ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ

ಯಾದಗಿರಿ: ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿರೋ ಘಟನೆ ಜಿಲ್ಲೆಯ ಹತ್ತಿಕುಣಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
22 ವರ್ಷದ ಮಂಜುಳಾ ಮೃತ ಯುವತಿ. ಕಳೆದ ಐದು ದಿನದಿಂದ ಮಂಜುಳ ಕಾಣೆಯಾಗಿದ್ದರು ಎನ್ನಲಾಗಿದೆ.

ಒಂದು ತಿಂಗಳ ಹಿಂದೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಅವರಾದಿ(ಬಿ) ಗ್ರಾಮದ ಮಲ್ಲಿಕಾರ್ಜುನ ಎಂಬಾತನಿಗೆ ಮಂಜುಳಾ ಅವರನ್ನ ಮದುವೆ ಮಾಡಿಕೊಡಲಾಗಿತ್ತು. ಒಂದು ವಾರದ ಹಿಂದೆ ಹಬ್ಬಕ್ಕೆ ತವರು ಮನೆಗೆ ಬಂದಿದ್ದರು ಎನ್ನಲಾಗಿದೆ. ಇದೀಗ ನೇಣುಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಸಿಪಿಐ ಸೋಮಶೇಖರ್ ಕೆಂಚರೆಡ್ಡಿ, ಪಿಎಸ್ಐ ಸುರೇಶ್ ಕುಮಾರ ಹಾಗೂ ಮಹಿಳಾ ಠಾಣೆ ಪಿಎಸ್ಐ ಶೀಲಾ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

The post ಹಬ್ಬಕ್ಕೆಂದು ತವರು ಮನೆಗೆ ಬಂದು 5 ದಿನಗಳಿಂದ ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ appeared first on News First Kannada.

Source: newsfirstlive.com

Source link