ನಾಳೆಯಿಂದ ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ಅವಕಾಶ- ತೀರ್ಥ, ಪ್ರಸಾದ ಇಲ್ಲ

ಉಡುಪಿ: ಜುಲೈ 11 ಭಾನುವಾರ ಮಧ್ಯಾಹ್ನದಿಂದ ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಪರ್ಯಾಯ ಅದಮಾರು ಮಠ ಹೇಳಿದೆ.

ವಾರದ ಹಿಂದೆ ರಾಜ್ಯ ಸರ್ಕಾರ ದೇವಸ್ಥಾನಗಳನ್ನು ತೆರೆಯಲು ಅವಕಾಶ ಕಲ್ಪಿಸಿತ್ತು. ರಾಜ್ಯಾದ್ಯಂತ ಮಠ, ಮಂದಿರಗಳು ತೆರೆದರೂ, ಉಡುಪಿ ಶ್ರೀ ಕೃಷ್ಣ ಮಠ ತೆರೆದಿರಲಿಲ್ಲ. ಕೊರೊನಾ ಹತೋಟಿಗೆ ಬಂದ ನಂತರ ಮಠದಲ್ಲಿ ಅವಕಾಶ ಕಲ್ಪಿಸುವುದಾಗಿ ಹೇಳಿತ್ತು.

ಇದೀಗ ಪರ್ಯಾಯ ಅದಮಾರು ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಇದೇ ಭಾನುವಾರದಿಂದ ಭಕ್ತರಿಗೆ ಮಠ ಪ್ರವೇಶಿಸಲು ಅವಕಾಶ ನೀಡಿದ್ದಾರೆ. ಮಧ್ಯಾಹ್ನದ ಪೂಜೆಯ ನಂತರ ಉಡುಪಿ ಶ್ರೀಕೃಷ್ಣನ ದರ್ಶನ ಮಾಡಬಹುದು. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಠದ ಒಳಗೆ ಬರುವ ಅವಕಾಶವನ್ನು ನೀಡಲಾಗಿದೆ.

ಉಡುಪಿ ಶ್ರೀಕೃಷ್ಣ ಮಠದ ಒಳಗೆ ಪ್ರವೇಶಿಸುವ ಸರತಿಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು, ಸ್ಯಾನಿಟೈಸರ್ ಬಳಸಿ ಮಠದೊಳಗೆ ಬರಬೇಕು ಎಂದು ಮಠ ಹೇಳಿದೆ. ತೀರ್ಥ ಪ್ರಸಾದದ ಅವಕಾಶ ಇಲ್ಲ. ದೇವರ ದರ್ಶನಕ್ಕೆ ಮಾತ್ರ ವ್ಯವಸ್ಥೆ ಕಲ್ಪಿಸಲಾಗಿದೆ.

The post ನಾಳೆಯಿಂದ ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ಅವಕಾಶ- ತೀರ್ಥ, ಪ್ರಸಾದ ಇಲ್ಲ appeared first on Public TV.

Source: publictv.in

Source link