ನಾಗಲ್ಯಾಂಡ್​​ನಲ್ಲಿ ಭೀಕರ ರಸ್ತೆ ಅಪಘಾತ.. ರಾಜ್ಯದ ಯೋಧ ಸಾವು

ನಾಗಲ್ಯಾಂಡ್​​ನಲ್ಲಿ ಭೀಕರ ರಸ್ತೆ ಅಪಘಾತ.. ರಾಜ್ಯದ ಯೋಧ ಸಾವು

ಬೆಳಗಾವಿ: ನಾಗಲ್ಯಾಂಡ್​​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜ್ಯದ ಯೋಧರೊಬ್ಬರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಶಿವಾಪುರದ ಯೋಧ ಮಂಜುನಾಥ ಗೌಡನ್ನವರ (38) ಮೃತಪಟ್ಟಿರುವ ಯೋಧ. ಕರ್ತವ್ಯದಲ್ಲಿದ್ದ ಇವರು ಗಸ್ತು ತಿರುಗುತ್ತಿದ್ದಾಗ ವಾಹನ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

blank

18 ವರ್ಷದಿಂದ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್​​ನಲ್ಲಿ ನೇಮಕಗೊಂಡು, ನಾಗಲ್ಯಾಂಡ್ ಗಡಿಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗಸ್ತು ತಿರುಗುತ್ತಿದ್ದಾಗ ಅರಣ್ಯ ಪ್ರದೇಶದಲ್ಲಿ ಅಪಘಾತ ಸಂಭವಿಸಿ ದುರ್ಘಟನೆ ನಡೆದಿದೆ. ನಾಳೆ ಸಂಜೆ 6ಗಂಟೆಗೆ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ದೇಶಾಭಿಮಾನಿಯ ಹೃದಯ ತಟ್ಟಿದ ಹುತಾತ್ಮ ಯೋಧನ ಪತ್ನಿ ಮಾಡಿದ ‘ಈ’ ಶಪಥ

The post ನಾಗಲ್ಯಾಂಡ್​​ನಲ್ಲಿ ಭೀಕರ ರಸ್ತೆ ಅಪಘಾತ.. ರಾಜ್ಯದ ಯೋಧ ಸಾವು appeared first on News First Kannada.

Source: newsfirstlive.com

Source link