ನಡು ರಸ್ತೆಯಲ್ಲೇ ಧಗಧಗಿಸಿದ ಕಾರು; ತಪ್ಪಿದ ಅನಾಹುತ

ನಡು ರಸ್ತೆಯಲ್ಲೇ ಧಗಧಗಿಸಿದ ಕಾರು; ತಪ್ಪಿದ ಅನಾಹುತ

ಹಾವೇರಿ: ಕಾರು ಒಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ತಾಲೂಕಿನ ಮೋಟೆಬೆನ್ನೂರು ಬಳಿ ನಡೆದಿದೆ.

blank

ಸಾಂಗ್ಲಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಕ್ಕದ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೆಂಕಿ ಹೊತ್ತಿಕೊಂಡು ಧಗಧಗಿಸಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

 

The post ನಡು ರಸ್ತೆಯಲ್ಲೇ ಧಗಧಗಿಸಿದ ಕಾರು; ತಪ್ಪಿದ ಅನಾಹುತ appeared first on News First Kannada.

Source: newsfirstlive.com

Source link