ರಾಜ್ಯದಲ್ಲಿಂದು 1,978 ಪಾಸಿಟಿವ್ ಕೇಸ್; 56 ಮಂದಿ ಸಾವು

ರಾಜ್ಯದಲ್ಲಿಂದು 1,978 ಪಾಸಿಟಿವ್ ಕೇಸ್; 56 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 28,135 ಱಪಿಡ್ ಆ್ಯಂಟಿಜೆನ್ ಟೆಸ್ಟ್​ ಹಾಗೂ 1,30,763 ಆರ್​ಟಿಪಿಸಿಆರ್​ ಟೆಸ್ಟ್​ಗಳೂ ಸೇರಿದಂತೆ ಕಳೆದ 24 ಗಂಟೆಗಳಲ್ಲಿ 1,58,898 ಕೊರೊನಾ ಪರೀಕ್ಷೆಗಳನ್ನ ನಡೆಸಲಾಗಿದೆ. ಈ ಪೈಕಿ ಇಂದು 1,978 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. ಈವರೆಗೆ ರಾಜ್ಯದಲ್ಲಿ ಸೋಂಕಿಗೊಳಗಾದವರ ಸಂಖ್ಯೆ 28,71,298 ಕ್ಕೆ ಏರಿಕೆಯಾಗಿದೆ.

ಇಂದು 2,326 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಈವರೆಗೆ 27,98,703 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು 56 ಮಂದಿ ಸೋಂಕಿನಿಂದ ಗುಣಮುಖರಾಗದೇ ಸಾವನ್ನಪ್ಪಿದ್ದು ಈವರೆಗೆ ಒಟ್ಟು 35,835 ಮಂದಿ ಕೊರೊನಾಗೆ ಬಲಿಯಾದಂತಾಗಿದೆ. ಸದ್ಯ ರಾಜ್ಯದಲ್ಲಿ 36,737 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿಅಂಶಗಳು ಹೇಳುತ್ತಿವೆ.

ಬೆಂಗಳೂರು ನಗರದಲ್ಲಿ ಇಂದು 433 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು ದಕ್ಷಿಣ ಕನ್ನಡ 195, ಹಾಸನ 132, ಮೈಸೂರು 261, ಶಿವಮೊಗ್ಗ 124 ಹಾಗೂ ತುಮಕೂರು ಜಿಲ್ಲೆಯಲ್ಲಿ 100 ಮಂದಿಗೆ ಸೋಂಕು ದೃಢವಾಗಿದೆ.

blank

The post ರಾಜ್ಯದಲ್ಲಿಂದು 1,978 ಪಾಸಿಟಿವ್ ಕೇಸ್; 56 ಮಂದಿ ಸಾವು appeared first on News First Kannada.

Source: newsfirstlive.com

Source link