ರವಿಶಂಕರ್ ಪ್ರಸಾದ್​, ಪ್ರಕಾಶ್ ಜಾವ್ಡೇಕರ್​ಗೆ ಪಕ್ಷ ಸಂಘಟನಾ ಜವಾಬ್ದಾರಿ..?

ರವಿಶಂಕರ್ ಪ್ರಸಾದ್​, ಪ್ರಕಾಶ್ ಜಾವ್ಡೇಕರ್​ಗೆ ಪಕ್ಷ ಸಂಘಟನಾ ಜವಾಬ್ದಾರಿ..?

ನವದೆಹಲಿ: ಮಾಜಿ ಕೇಂದ್ರ ಸಚಿವರಾದ ರವಿಶಂಕರ್ ಪ್ರಸಾದ್ ಹಾಗೂ ಪ್ರಕಾಶ್ ಜಾವಡೇಕರ್ ಅವರಿಗೆ ಬಿಜೆಪಿ ಸಂಘಟನಾ ಸ್ಥಾನ ನೀಡಲಿದೆ ಎನ್ನಲಾಗಿದೆ. ಇತ್ತೀಚೆಗೆ ನಡೆದ ಸಂಪುಟ ಪುನಾರಚನೆಯಲ್ಲಿ ರವಿಶಂಕರ್ ಪ್ರಸಾದ್, ಪ್ರಕಾಶ್ ಜಾವಡೇಕರ್ ಸೇರಿದಂತೆ ಹಲವರು ರಾಜೀನಾಮೆ ನೀಡಿದ್ದಾರೆ.

ಈ ಇಬ್ಬರು ನಾಯಕರಲ್ಲಿ ಒಬ್ಬರಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಇನ್ನೊಬ್ಬರಿಗೆ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಹೇಳುತ್ತಿವೆ. ಈ ಕುರಿತು ಬಿಜೆಪ ರಾಷ್ಟ್ರೀಯಾಧ್ಯಕ್ಷ ಜೆಪಿ ನಡ್ಡಾ ಶೀಘ್ರವೇ ಅಧಿಕೃತ ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ನಡೆದ ಕ್ಯಾಬಿನೆಟ್ ಪುನಾರಚನೆಯಲ್ಲಿ 43 ನೂತನ ಸಚಿವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

The post ರವಿಶಂಕರ್ ಪ್ರಸಾದ್​, ಪ್ರಕಾಶ್ ಜಾವ್ಡೇಕರ್​ಗೆ ಪಕ್ಷ ಸಂಘಟನಾ ಜವಾಬ್ದಾರಿ..? appeared first on News First Kannada.

Source: newsfirstlive.com

Source link