ಸಿದ್ಧಾರೂಢ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಶ್ವಥ್ ನಾರಾಯಣ್

ಹುಬ್ಬಳ್ಳಿ: ಪ್ರವಾಸದಲ್ಲಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು ಇಂದು ಬೆಳಗ್ಗೆಯೇ ಹುಬ್ಬಳ್ಳಿಯ ಆರಾಧ್ಯ ದೈವವಾದ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ಸಿದ್ಧಾರೂಢರು ಮತ್ತು ಗುರುನಾಥರೂಢರ ಗದ್ದುಗೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ನಗರಕ್ಕೆ ಭೇಟಿ ನೀಡಿದ ಅವರು, ಇಂದು ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇದರ ಮಧ್ಯೆಯೇ ಬೆಳಂಬೆಳಗ್ಗೆ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ್ದಾರೆ. ಉಭಯ ಶ್ರೀಗಳ ಗದ್ದುಗೆ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು.

ಡಿಸಿಎಂ ಅಶ್ವಥ್ ನಾರಾಯಣ್ ನಗರದಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ ಕರ್ನಾಟಕ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಹಾಲ್‍ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020ಕ್ಕೆ ಸಂಬಂಧಿಸಿದಂತೆ ಶಿಕ್ಷಣ ತಜ್ಞರೊಂದಿಗಿನ ಚರ್ಚೆಯಲ್ಲಿ ಪಾಲ್ಗೊಳ್ಳುವರು.

ಬೆಳಗ್ಗೆ 10.30ಕ್ಕೆ ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಮತ್ತು ಬಳ್ಳಾರಿ ಜಿಲ್ಲೆಯ ಶಾಲೆಗಳಿಗೆ ಕೋವಿಡ್ 19ರ ಕಿಟ್‍ಗಳನ್ನು ಪೂರೈಸುವ ವಾಹನಗಳಿಗೆ ಚಾಲನೆ ನೀಡುವರು. ಬೆಳಗ್ಗೆ 11.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಯುನಿವರ್ಸಿಟಿ ಸೈಂಟಿಫಿಕ್ ಇನ್‍ಸ್ಟ್ರುಮೆಂಟೆನೇಷನ್ ಸೆಂಟರ್ (ಯುಎಸ್‍ಐಸಿ) ಗೆ ಭೇಟಿ ನೀಡುವರು. ಮಧ್ಯಾಹ್ನ 12.30ಕ್ಕೆ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಕ್ಕೆ, ಮಧ್ಯಾಹ್ನ 3.15ಕ್ಕೆ ಹುಬ್ಬಳ್ಳಿಯ ದೇಶಪಾಂಡೆ ಫೌಂಡೇಶನ್ ಹಾಗೂ ಸಂಜೆ 5.30ಕ್ಕೆ ನಗರದ ಐಟಿ ಪಾರ್ಕ್‍ಗೆ ಭೇಟಿ ನೀಡುವರು. ಸಂಜೆ 7 ಗಂಟೆಗೆ ಕುಸುಗಲ್ ರಸ್ತೆಯ ಶ್ರೀನಿವಾಸ ಗಾರ್ಡನ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.

The post ಸಿದ್ಧಾರೂಢ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಶ್ವಥ್ ನಾರಾಯಣ್ appeared first on Public TV.

Source: publictv.in

Source link