ರಾಕ್‍ಲೈನ್ ವೆಂಕಟೇಶ್ ಮನೆ ಮೇಲೆ ಕಿಡಿಗೇಡಿಗಳಿಂದ ದಾಳಿ

ಬೆಂಗಳೂರು: ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಮನೆ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ.

ಜುಲೈ 11ರ ನಸುಕಿನ ಜಾವ 2:56ಕ್ಕೆ ಬೈಕಿನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಮದ್ಯದ ಬಾಟಲನ್ನು ಮನೆಗೆ ಎಸೆದು ಪರಾರಿಯಾಗಿದ್ದಾರೆ. ಇದನ್ನೂ ಓದಿ : ಮಾತಾಡುವ ಸ್ವಾತಂತ್ರ್ಯ ಕೆಲವರಿಗೆ ಮಾತ್ರ ಇದೆಯಾ?: ರಾಕ್‍ಲೈನ್ ವೆಂಕಟೇಶ್

ಇಲ್ಲಿಯವರೆಗೆ ಇದು ಹೋಗುತ್ತದೆ ಅಂತ ಗೊತ್ತಿರಲಿಲ್ಲ. ನಾವು ಸುಮ್ಮನಿದ್ದರೂ ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಹೀಗಾಗಿ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಕುಟುಂಬದವರಿಗೆ ತಿಳಿಸಿದ್ದೇನೆ ಎಂದು ರಾಕ್ ಲೈನ್ ವೆಂಕಟೇಶ್ ಮಾಹಿತಿ ನೀಡಿದ್ದಾರೆ.

The post ರಾಕ್‍ಲೈನ್ ವೆಂಕಟೇಶ್ ಮನೆ ಮೇಲೆ ಕಿಡಿಗೇಡಿಗಳಿಂದ ದಾಳಿ appeared first on Public TV.

Source: publictv.in

Source link