ಪೋಷಕರೇ ಗಮನಿಸಿ; SSLC ಪರೀಕ್ಷೆ ನಡೆಸಲು ಸರ್ಕಾರಕ್ಕೆ ಗ್ರೀನ್ ಸಿಗ್ನಲ್

ಪೋಷಕರೇ ಗಮನಿಸಿ; SSLC ಪರೀಕ್ಷೆ ನಡೆಸಲು ಸರ್ಕಾರಕ್ಕೆ ಗ್ರೀನ್ ಸಿಗ್ನಲ್

ಎಸ್​​ಎಸ್​​ಎಲ್​ಸಿ ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ದ ಪಿಐಎಲ್​ ವಿಚಾರಣೆ ಹೈಕೋರ್ಟ್​​ನ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಯಿತು. ಅರ್ಜಿಯಲ್ಲಿ ಸಿಬಿಎಸ್​ಇ ಮಾದರಿಯಲ್ಲಿ ಪರೀಕ್ಷೆ ರದ್ದಿಗೆ ಮನವಿ ಮಾಡಲಾಗಿತ್ತು. ಅರ್ಜಿದಾರರ ಮನವಿಗೆ ಸರ್ಕಾರ ಆಕ್ಷೇಪಣೆ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಕೋರ್ಟ್​ ಎಸ್​​ಎಸ್​​ಎಲ್​ಸಿ ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ.

2 ದಿನಗಳ ಕಾಲ ಮಾತ್ರ ಪರೀಕ್ಷೆ ನಡೆಸುತ್ತೇವೆ.. ತಲಾ ಒಂದು ಗಂಟೆಯ ಅವಧಿಯ ಪರೀಕ್ಷೆ ನಡೆಯಲಿದೆ ಎಂದು ಹೈಕೋರ್ಟ್​​ನಲ್ಲಿ ರಾಜ್ಯ ಸರ್ಕಾರದ ಪರ ವಕೀಲರು ವಾದ ಮಂಡಿಸಿದ್ದರು.

ಇದಕ್ಕೆ ಕೋವಿಡ್ ಸೋಂಕು ಕಡಿಮೆ ಇರುವುದರಿಂದ ಪರೀಕ್ಷೆ ನಡೆಸುವುದು ಸೂಕ್ತ ಎಂದು ನ್ಯಾ.ಬಿ.ವಿ.ನಾಗರತ್ನ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೋರ್ಡ್ ಪರೀಕ್ಷೆ ಬರೆಯಬೇಕು. ಅವರ ಭವಿಷ್ಯದ ಆಯ್ಕೆ ದೃಷ್ಟಿಯಿಂದ ಪರೀಕ್ಷೆ ಅಗತ್ಯ.. 3 ಗಂಟೆಗಳ ಬದಲಿಗೆ 1 ಗಂಟೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಇಲ್ಲವಾದರೆ ಅಂಕ ನೀಡುವುದು ಹೇಗೆ.? ಪರೀಕ್ಷೆ ಬರೆಯದಿರುವುದು ವಿದ್ಯಾರ್ಥಿಗಳಿಗೆ ಬಿಟ್ಟಿದ್ದು.. ವಿದ್ಯಾರ್ಥಿಗಳ ಪರವಾಗಿ ಪೋಷಕರು ನಿರ್ಧರಿಸಲಿ. ಈಗ ಬರೆಯದಿದ್ದರೆ ಮುಂದಿನ ವರ್ಷ ಪರೀಕ್ಷೆ ಬರೆಯಲಿ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ. ಬಳಿಕ ಸರ್ಕಾರದ ನಿರ್ಧಾರದಂತೆ ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ.

The post ಪೋಷಕರೇ ಗಮನಿಸಿ; SSLC ಪರೀಕ್ಷೆ ನಡೆಸಲು ಸರ್ಕಾರಕ್ಕೆ ಗ್ರೀನ್ ಸಿಗ್ನಲ್ appeared first on News First Kannada.

Source: newsfirstlive.com

Source link