ಸಿಬ್ಬಂದಿ ಮುಖಕ್ಕೆ ಖಾರದ ಪುಡಿ ಎರಚಿ 7 ಕೈದಿಗಳು ಪರಾರಿ

ಇಟಾನಗರ್: ಜೈಲಿನಲ್ಲಿದ್ದ 7 ಮಂದಿ ವಿಚಾರಣಾಧೀನ ಕೈದಿಗಳು ಸೆಕ್ಯುರಿಟಿ ಗಾರ್ಡ್‍ಗಳ ಮುಖಕ್ಕೆ ಖಾರದ ಪುಡಿ ಎರಚಿ ಜೈಲಿನಿಂದ ತಪ್ಪಿಸಿಕೊಂಡಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ.

ಅಭಿಜಿತ್ ಗೊಗೋಯ್, ತಾರೋ ಹಮಾಮ್, ಕಲಾಂ ಅಪಂಗ್, ತಾಲುಮ್ ಪನೀಯಿಂಗ್, ಸುಭಾಷ್ ಮಂಡಲ್, ರಾಜಾ ತಾಯೆಂಗ್ ಮತ್ತು ದನಿ ಗಮ್ಲಿನ್ ಜೈಲಿನಿಂದ ಪರಾರಿಯಾಗಿರುವ ಕೈದಿಗಳಾಗಿದ್ದಾರೆ. ಅರುಣಾಚಲಪ್ರದೇಶದ ಪೂರ್ವ ಸಿಯಾಂಗ್ ಜಿಲ್ಲೆಯಲ್ಲಿರುವ ಪಾಸಿಘಾಟ್ ಜೈಲಿನಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ:  ಬಡ-ಮಧ್ಯಮ ವರ್ಗದವರಿಗೆ ದುಬಾರಿಯಾದ ನಂದಿಬೆಟ್ಟ – ಊಟ, ತಿಂಡಿ, ಕಾಫಿ ಸೇರಿದಂತೆ ಪ್ರವೇಶ ಶುಲ್ಕವೂ ಬಲು ದುಬಾರಿ

ಈ ಜೈಲಿನಲ್ಲಿದ್ದ 7 ಮಂದಿ ವಿಚಾರಣಾಧೀನ ಕೈದಿಗಳು ಭಾನುವಾರ ರಾತ್ರಿ ಸೆಕ್ಯುರಿಟಿ ಗಾರ್ಡ್‍ಗಳ ಮುಖಕ್ಕೆ ಖಾರದ ಪುಡಿ ಎರಚಿ ಜೈಲಿನಿಂದ ತಪ್ಪಿಸಿಕೊಂಡಿದ್ದಾರೆ. ಆ ಜೈಲಿನಲ್ಲಿ 94 ಕೈದಿಗಳಿದ್ದರು. ಭಾನುವಾರ ರಾತ್ರಿ 7.30ರ ವೇಳೆಗೆ 7 ಕೈದಿಗಳು ಜೈಲಿನ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅವರ ಕಣ್ಣಿಗೆ ಖಾರದ ಪುಡಿ ಹಾಕಿದ್ದಾರೆ. ಈ ದಾಳಿಯಲ್ಲಿ ಐದಕ್ಕೂ ಹೆಚ್ಚು ಸೆಕ್ಯುರಿಟಿ ಗಾರ್ಡ್‍ಗಳಿಗೆ ಗಾಯಗಳಾಗಿವೆ.

ಈ ದಾಳಿ ನಡೆದ ವೇಳೆ ಕೇವಲ 10 ಮಂದಿ ಸೆಕ್ಯುರಿಟಿ ಗಾರ್ಡ್‍ಗಳು ಕಾರ್ಯ ನಿರ್ವಹಿಸುತ್ತಿದ್ದರು. ಪರಾರಿಯಾಗಿರುವ ಕೈದಿಗಳ ಮಾಹಿತಿಯನ್ನು ಎಲ್ಲ ಪೊಲೀಸ್ ಠಾಣೆಗಳಿಗೂ ಕಳುಹಿಸಲಾಗಿದ್ದು, ಅವರನ್ನು ಹುಡುಕಲು ಪೊಲೀಸರು ಮುಂದಾಗಿದ್ದಾರೆ.

The post ಸಿಬ್ಬಂದಿ ಮುಖಕ್ಕೆ ಖಾರದ ಪುಡಿ ಎರಚಿ 7 ಕೈದಿಗಳು ಪರಾರಿ appeared first on Public TV.

Source: publictv.in

Source link