ವಿಷಪೂರಿತ ಆಹಾರ ಸೇವಿಸಿ ಮೂವರ ದುರ್ಮರಣ; ಇಬ್ಬರು ಗಂಭೀರ

ವಿಷಪೂರಿತ ಆಹಾರ ಸೇವಿಸಿ ಮೂವರ ದುರ್ಮರಣ; ಇಬ್ಬರು ಗಂಭೀರ

ಚಿತ್ರದುರ್ಗ: ವಿಷಪೂರಿತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಮತ್ತಿಬ್ಬರು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ.

blank

ತಿಪ್ಪಾನಾಯ್ಕ್ (46), ಪತ್ನಿ ಸುಧಾಬಾಯಿ(43), ವೃದ್ಧೆ ಗುಂಡಿಬಾಯಿ (75) ಸಾವನ್ನಪ್ಪಿದವರು. ನಿನ್ನೆ ರಾತ್ರಿ ಮುದ್ದೆ ಸಾರು ಸೇವನೆ ಬಳಿಕ ಕುಟುಂಬಸ್ಥರು ಅಸ್ವಸ್ಥರಾಗಿದ್ದು ತಕ್ಷಣವೇ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.  ಆದರೆ ಚಿಕಿತ್ಸೆ ಫಲಕಾರಿಯಾಗದೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು ಘಟನೆ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

The post ವಿಷಪೂರಿತ ಆಹಾರ ಸೇವಿಸಿ ಮೂವರ ದುರ್ಮರಣ; ಇಬ್ಬರು ಗಂಭೀರ appeared first on News First Kannada.

Source: newsfirstlive.com

Source link