ಹಿಂದೂ ಯುವತಿ-ಮುಸ್ಲಿಂ ಯುವಕನ ಮದುವೆ – ಆಹ್ವಾನ ಪತ್ರಿಕೆ ಪ್ರಿಂಟ್ ಬಳಿಕ ವಿವಾಹ ಕ್ಯಾನ್ಸಲ್

– ಹಿಂದೂ ಸಂಘಟನೆಗಳಿಂದ ಲವ್ ಜಿಹಾದ್ ಆರೋಪ
– ಮದುವೆಗೆ ತೀವ್ರ ವಿರೋಧ, ಪ್ರತಿಭಟನೆ

ಮುಂಬೈ: ಹಿಂದೂ ಯುವತಿ ಮತ್ತು ಮುಸ್ಲಿಂ ಯುವಕನ ಮದುವೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಾಹ ಸಮಾರಂಭವನ್ನು ರದ್ದುಗೊಳಿಸಿದ್ದಾರೆ. ಮಹಾರಾಷ್ಟ್ರದ ನಾಸಿಕ್ ನಲ್ಲಿ ಎರಡೂ ಕುಟುಂಬಗಳ ಒಪ್ಪಿಗೆ ಮೇರೆಗೆ ಮದುವೆ ನಿಶ್ಚಯವಾಗಿತ್ತು. ಮದುವೆಗೆ ಕಲ್ಯಾಣ ಮಂಟಪ ಬುಕ್ ಮಾಡಲಾಗಿತ್ತು. ಆದ್ರೆ ಮದುವೆ ಆಹ್ವಾನ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಬಳಿಕ ದೊಡ್ಡ ಸಂಚಲನವೇ ಸೃಷ್ಟಿಯಾಗಿದ್ದರಿಂದ ಕುಟುಂಬಸ್ಥರು ಮದುವೆ ನಿರ್ಧಾರದಿಂದ ಸದ್ಯ ಹಿಂದೆ ಸರಿದಿದ್ದಾರೆ.

ನಾಸಿಕ್ ನಗರದ ರಸಿಕಾ (28) ಮದುವೆ ಗೆಳೆಯ ಆಸೀಫ್ ಜೊತೆ ನಿಶ್ಚಯವಾಗಿತ್ತು. ರಸಿಕಾ ದಿವ್ಯಾಂಗ ಆಗಿದ್ದರಿಂದ ಲವ್ ಜಿಹಾದ್ ಮಾಡಲಾಗ್ತಿದೆ ಎಂದು ಆರೋಪಿಸಿ ಸ್ಥಳೀಯ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇಷ್ಟೆಲ್ಲ ವಿವಾದ ಗಲಾಟೆ ನಂತ್ರವೂ ಪೋಷಕರು ಮಗಳ ನಿರ್ಧಾರದ ಪರ ನಿಂತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಸಿಕಾ ತಂದೆ ಪ್ರಸಾದ್, ನನ್ನ ಮಗಳು ದಿವ್ಯಾಂಗ ಆಗಿರೋದರಿಂದ ಆಕೆಯ ಮದುವೆ ವಿಳಂಬವಾಗಿರುವ ವಿಷಯ ನಮ್ಮ ಸಮುದಾಯದ ಎಲ್ಲರಿಗೂ ಗೊತ್ತು. ಕೊನೆಗೆ ಮಗಳು ತನ್ನ ಇಚ್ಛೆಯನ್ನು ನಮ್ಮ ಮುಂದೆ ಹೇಳಿಕೊಂಡಿದ್ದಳು. ಇತ್ತ ಆಸೀಫ್ ಕುಟುಂಬಸ್ಥರು ಮಗಳನ್ನು ಸೊಸೆ ಮಾಡಿಕೊಳ್ಳಲು ಒಪ್ಪಿದ್ದರು. ಇಲ್ಲಿ ಯಾವುದೇ ಬಲವಂತ ಧರ್ಮ ಪರಿವರ್ತನೆ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮುಸ್ಲಿಂ ನೆರೆಹೊರೆಯವರ ಸಮ್ಮುಖದಲ್ಲಿ ಹಿಂದೂ ಜೋಡಿಯ ಮದ್ವೆ

blank

ಇಬ್ಬರು ವಯಸ್ಕರು ಪರಸ್ಪರ ಪ್ರೀತಿಸಿದ್ದಾರೆ. ನಾವು ಅವರ ಪ್ರೀತಿಯನ್ನು ಒಪ್ಪಿ ಮದುವೆ ಮಾಡಲು ಮುಂದಾಗಿದ್ದೇವೆ. ಇನ್ನೂ ಆಸೀಫ್ ಕುಟುಂಬಸ್ಥರು ಹಿಂದೂ ಸಂಪ್ರದಾಯದಂತೆ ಮದುವೆ ನಡೆಸಲು ಒಪ್ಪಿಗೆ ಸೂಚಿಸಿರೋದು ವಿಶೇಷ ಎಂದು ಪ್ರಸಾದ್ ಎಲ್ಲ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಇದನ್ನೂ ಓದಿ:  ಮಾದರಿಯಾಯ್ತು ಹಿಂದೂ ಯುವಕ, ಮುಸ್ಲಿಂ ಯುವತಿಯ ಸರಳ ಮದುವೆ

ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಮದುವೆಯನ್ನು ರದ್ದುಗೊಳಿಸಲಾಗಿದೆ. ಎರಡೂ ಕುಟುಂಬಗಳು ಮುಂದೆ ಮದುವೆ ನಡೆಸುತ್ತಾ ವಿಷಯ ತಿಳಿದು ಬಂದಿಲ್ಲ. ಇದನ್ನೂ ಓದಿ: ಮುಸ್ಲಿಂ ತಂದೆಯಿಂದ ಹಿಂದೂ ಸಂಪ್ರದಾಯದಂತೆ ದತ್ತು ಮಗನ ಮದ್ವೆ

The post ಹಿಂದೂ ಯುವತಿ-ಮುಸ್ಲಿಂ ಯುವಕನ ಮದುವೆ – ಆಹ್ವಾನ ಪತ್ರಿಕೆ ಪ್ರಿಂಟ್ ಬಳಿಕ ವಿವಾಹ ಕ್ಯಾನ್ಸಲ್ appeared first on Public TV.

Source: publictv.in

Source link