ರಾಜ್ಯದಲ್ಲಿ 2 ಸಾವಿರಕ್ಕಿಂತ ಕಡಿಮೆ ಪಾಸಿಟಿವ್ ಕೇಸ್: ಬೆಂಗಳೂರಲ್ಲಿ 401 ಮಂದಿಗೆ ಸೋಂಕು

ರಾಜ್ಯದಲ್ಲಿ 2 ಸಾವಿರಕ್ಕಿಂತ ಕಡಿಮೆ ಪಾಸಿಟಿವ್ ಕೇಸ್: ಬೆಂಗಳೂರಲ್ಲಿ 401 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯಾದ್ಯಂತ ಇಂದು 34,440 ಱಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 90,154 ಆರ್​​ಟಿಪಿಸಿಆರ್ ಟೆಸ್ಟ್​ಗಳೂ ಸೇರಿದಂತೆ ಒಟ್ಟು 1,24,594 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು ರಾಜ್ಯದಲ್ಲಿ 1,913 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 28,74,596ಕ್ಕೆ ಏರಿಕೆಯಾಗಿದೆ.

ಇಂದು 2,489 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಇಲ್ಲಿವರೆಗೆ ಒಟ್ಟು 28,04,396 ಮಂದಿ ಕೊರೊನಾದಿಂದ ಮುಕ್ತರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು 48 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು ಈವರೆಗೆ ಒಟ್ಟು 35,944 ಮಂದಿ ಸೋಂಕಿಗೆ ಬಲಿಯಾದಂತಾಗಿದೆ. ರಾಜ್ಯದಲ್ಲಿ ಸದ್ಯ 34,234 ಆ್ಯಕ್ಟಿವ್ ಕೇಸ್​ಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿಅಂಶಗಳು ಹೇಳುತ್ತಿವೆ.

ಬೆಂಗಳೂರು ನಗರದಲ್ಲಿ 401 ಮಂದಿ ಸೋಂಕಿಗೊಳಗಾಗಿದ್ರೆ ಧಾರವಾಡದಲ್ಲಿ 222, ಹಾಸನ 191, ಮೈಸೂರು 198, ತುಮಕೂರು ಜಿಲ್ಲೆಯಲ್ಲಿ 170 ಮಂದಿಗೆ ಕೊರೊನಾ ಪಾಸಿಟಿವ್ ಆಗಿದೆ.

The post ರಾಜ್ಯದಲ್ಲಿ 2 ಸಾವಿರಕ್ಕಿಂತ ಕಡಿಮೆ ಪಾಸಿಟಿವ್ ಕೇಸ್: ಬೆಂಗಳೂರಲ್ಲಿ 401 ಮಂದಿಗೆ ಸೋಂಕು appeared first on News First Kannada.

Source: newsfirstlive.com

Source link