ಮೇಕೆದಾಟು ಯೋಜನೆಗೆ ತಮಿಳುನಾಡು ಪರವಾನಿಗೆ ಅವಶ್ಯವಿಲ್ಲ: ಎಂಬಿಪಿ

ವಿಜಯಪುರ: ಮೇಕೆದಾಟು ಯೋಜನೆ ನಮ್ಮ ರಾಜ್ಯದಲ್ಲಿ ನಡೆಯುವ ಯೋಜನೆ. ಇದಕ್ಕೆ ತಮಿಳುನಾಡು ಸರ್ಕಾರ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ಅವರ ಪರವಾನಿಗೆ ನಮಗೆ ಬೇಕಾಗಿಲ್ಲ ಎಂದು ಮಾಜಿ ನೀರಾವರಿ ಸಚಿವ ಎಂ.ಬಿ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ವಿಜಯನಗರದಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಎಂ.ಬಿ ಪಾಟೀಲ್, ನಾವು ನಮ್ಮ ನೀರನ್ನು ಬಳಕೆ ಮಾಡಿಕೊಳ್ಳುತ್ತಿದ್ದೇವೆ. ತಮಿಳುನಾಡು ಈ ವಿಚಾರದಲ್ಲಿ ಕ್ಯಾತೆ ತೆಗೆಯಬಾರದು. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೂ ಅನುಕೂಲವಾಗಲಿದೆ. ಮೇಕೆದಾಟು ಯೋಜನೆಯಿಂದ ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆಗೆ ಸಹಾಯಕವಾಗಲಿದೆ. ರಾಜ್ಯ ಸರ್ಕಾರ ಸರ್ವಪಕ್ಷ ಸಭೆ ಕರೆದು ಇದರ ಬಗ್ಗೆ ಅಭಿಪ್ರಾಯ ಪಡೆಯಬೇಕು. ಅಲ್ಲದೆ ಯೋಜನೆ ಜಾರಿಗೆ ಕೇಂದ್ರದ ಮೇಲೆ ಒತ್ತಡ ಹಾಕಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಮೇಕೆದಾಟು ಯೋಜನೆ – ಮೂರು ಮಹತ್ವದ ನಿರ್ಣಯಗಳಿಗೆ ತಮಿಳುನಾಡು ಅಂಗೀಕಾರ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಯುವಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ. ಇದಕ್ಕೆ ಅವರ ಪರವಾನಿಗೆ ಪಡೆಯುವುದು ಅವಶ್ಯವಿಲ್ಲ. ಕಾಂಗ್ರೆಸ್ ಪಕ್ಷದ ವತಿಯಿಂದಲೂ ತಮಿಳುನಾಡಿಗೆ ಯೋಜನೆ ಬಗ್ಗೆ ಮನವರಿಕೆ ಮಾಡಲಾಗುವುದು. ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಅವರ ಜೊತೆಗೆ ಈ ಬಗ್ಗೆ ಮಾತುಕತೆ ಮಾಡುತ್ತೇನೆ ಎಂದರು.

The post ಮೇಕೆದಾಟು ಯೋಜನೆಗೆ ತಮಿಳುನಾಡು ಪರವಾನಿಗೆ ಅವಶ್ಯವಿಲ್ಲ: ಎಂಬಿಪಿ appeared first on Public TV.

Source: publictv.in

Source link