ಚಿತ್ರದುರ್ಗದಲ್ಲಿ ಅಪಾರ ಪ್ರಮಾಣದ ಸ್ಫೋಟಕ ವಶ, ಮೂವರ ಬಂಧನ

ಚಿತ್ರದುರ್ಗದಲ್ಲಿ ಅಪಾರ ಪ್ರಮಾಣದ ಸ್ಫೋಟಕ ವಶ, ಮೂವರ ಬಂಧನ

ಚಿತ್ರದುರ್ಗ:  ಗಣಿಗಾರಿಕೆ ಮೇಲೆ ದಾಳಿ ಮಾಡಿ ಅಕ್ರಮವಾಗಿ  ಸಂಗ್ರಹಿಸಿಟ್ಟಿದ್ದ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪೊಲೀಸರು ವಶ ಪಡಿಸಿಕೊಂಡ ಘಟನೆ ಜಿಲ್ಲೆಯಲ್ಲಿ ದಾಖಲಾಗಿದೆ.

blankಪೂರ್ವ ವಲಯದ IGP ಸ್ಕ್ವಾಡ್ ಇಂದು ಕಾರ್ಯಾಚರಣೆ ನಡೆಸಿದ್ದು ಹೊಳಲ್ಕೆರೆ ತಾಲ್ಲೂಕು ಚಟ್ನಹಳ್ಳಿಯಲ್ಲಿ ಅಕ್ರಮ ಗಣಿಗಾರಿಕೆ ಮಾಡುವವರು ಸಂಗ್ರಹಿಸಿಟ್ಟಿದ್ದ ಎಲೆಕ್ಟ್ರಾನಿಕ್ ಡೆಟೋನೇಟರ್, ಸೇರಿ 40ಕ್ಕೂ ಹೆಚ್ಚು ಸ್ಪೋಟಕಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಈ ವೇಳೆ ಮಹಂತೇಶ್, ಹನುಮಂತ, ಕುಮಾರ್ ಎಂಬುವವರನ್ನು ಪೊಲೀಸರು ಬಂಧಿಸಿದ್ದು ಸರ್ಕಾರಿ ಗುಡ್ಡದಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದರು ಎನ್ನಲಾಗಿದೆ. ಈ ಕುರಿತು ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

The post ಚಿತ್ರದುರ್ಗದಲ್ಲಿ ಅಪಾರ ಪ್ರಮಾಣದ ಸ್ಫೋಟಕ ವಶ, ಮೂವರ ಬಂಧನ appeared first on News First Kannada.

Source: newsfirstlive.com

Source link