ದರ್ಶನ್ ವಿರುದ್ಧ ಇಂದ್ರಜಿತ್ ಗಂಭೀರ ಆರೋಪ; ರಾಜ್ಯ ಸರ್ಕಾರದಿಂದ ತನಿಖೆಗೆ ಸೂಚನೆ

ದರ್ಶನ್ ವಿರುದ್ಧ ಇಂದ್ರಜಿತ್ ಗಂಭೀರ ಆರೋಪ; ರಾಜ್ಯ ಸರ್ಕಾರದಿಂದ ತನಿಖೆಗೆ ಸೂಚನೆ

ಮೈಸೂರು: ನಟ ದರ್ಶನ್ ಮತ್ತು ಸ್ನೇಹಿತರ ಗಲಾಟೆ ವಿಚಾರವಾಗಿ ಇಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ ನಡೆಸಿ ಹಲವು ಆರೋಪಗಳನ್ನ ಮಾಡಿದ್ದಾರೆ. ಈ ಹಿನ್ನೆಲೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

ಇದನ್ನೂ ಓದಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ & ಸ್ನೇಹಿತರ ಮೇಲೆ ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ

ಇಂದ್ರಜಿತ್ ಲಂಕೇಶ್ ಅವರು ಇಂದು ಬೆಳಿಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರನ್ನ ಭೇಟಿಯಾಗಿ ದರ್ಶನ್ ಅವರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ಸದ್ಯ ಗೃಹ ಇಲಾಖೆಯಿಂದ ಮೈಸೂರು ಪೊಲೀಸ್ ಆಯುಕ್ತರಿಗೆ ಆದೇಶ ಪತ್ರ ರವಾನೆಯಾಗಿದ್ದು..ವಿವಾದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಸತ್ಯಾಸತ್ಯತೆ ತಿಳಿಸುವಂತೆ ಆದೇಶಿಸಲಾಗಿದೆ.

blank

ಇದನ್ನೂ ಓದಿ: ದರ್ಶನ್ vs ಇಂದ್ರಜಿತ್: ದೂರಿನ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಹೇಳಿದ್ದೇನು?

ಸರ್ಕಾರದ ಆದೇಶದಂತೆ ತನಿಖೆಯನ್ನ ಕೈಗೆತ್ತಿಕೊಳ್ಳುತ್ತೇವೆ ಎಂದು ನ್ಯೂಸ್‌ಫಸ್ಟ್‌ಗೆ ಮೈಸೂರು ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ.

The post ದರ್ಶನ್ ವಿರುದ್ಧ ಇಂದ್ರಜಿತ್ ಗಂಭೀರ ಆರೋಪ; ರಾಜ್ಯ ಸರ್ಕಾರದಿಂದ ತನಿಖೆಗೆ ಸೂಚನೆ appeared first on News First Kannada.

Source: newsfirstlive.com

Source link