ಗುರು ಪೂರ್ಣಿಮೆ ವಿಶೇಷ: 3 ಲಕ್ಷ ಮಾತ್ರೆ, 10,000 ಮಾಸ್ಕ್​ ಮೂಲಕ ಸಾಯಿ ಬಾಬಾಗೆ ವಿಶೇಷ ಅಲಂಕಾರ​

ಗುರು ಪೂರ್ಣಿಮೆ ವಿಶೇಷ: 3 ಲಕ್ಷ ಮಾತ್ರೆ, 10,000 ಮಾಸ್ಕ್​ ಮೂಲಕ ಸಾಯಿ ಬಾಬಾಗೆ ವಿಶೇಷ ಅಲಂಕಾರ​

ಬೆಂಗಳೂರು: ಗುರುಪೂರ್ಣಿಮೆ ಅಂಗವಾಗಿ ಜೆಪಿ ನಗರದ ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆ, 10 ಸಾವಿರ ಮಾಸ್ಕ್‌, 2 ಸಾವಿರ ಸ್ಯಾನಿಟೈಸರ್‌ ಬಳಸಿ ವಿಶೇಷ ಅಲಂಕಾರ ಮಾಡಿರುವುದನ್ನ ಕಂಡು ಭಕ್ತಾದಿಗಳು ಪುಳಕಿತರಾದರು.

blank

ಕೊರೊನಾ ಮೂರನೇ ಅಲೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವುದು ಹಾಗೂ ವಿಶೇಷ ವಾದ ಅಲಂಕಾರದಿಂದ ಜನರಿಗೆ ಉಪಯೋಗವಾಗಬೇಕು ಎನ್ನುವ ಉದ್ದೇಶದಿಂದ ಮಾತ್ರೆಗಳನ್ನು ಬಳಸಿ ಅಲಂಕಾರ ಮಾಡುವ ಯೋಜನೆಯನ್ನು ಕೈಗೆತ್ತುಕೊಳ್ಳಲಾಯಿತು. 3 ಲಕ್ಷ ಮಾತ್ರೆ,10 ಸಾವಿರ ಮಾಸ್ಕ್‌, 2 ಸಾವಿರ ಸ್ಯಾನಿಟೈಸರ್‌ ಹಾಗೂ ರೇಷನ್‌ ಕಿಟ್​ನಲ್ಲಿ ಇರುವಂತಹ ಪದಾರ್ಥಗಳಿಂದ ಅಲಂಕಾರ ಮಾಡಿದ್ದೇವೆ.

blank

ಸುಮಾರು 4 ದಿನಗಳ ಕಾಲ ತಯಾರಿ ನಡೆಸಿದ್ದು, ಒಂದು ವಾರಗಳ ನಂತರ ಇಲ್ಲಿ ಬಳಸಲಾಗಿರುವ ಎಲ್ಲಾ ರೀತಿಯ ವಸ್ತುಗಳನ್ನು ಅಗತ್ಯವಿರುವ ಜನರಿಗೆ ನೀಡಲಿದ್ದೇವೆ ಎಂದು ಕಾರ್ಯಕ್ರಮದ ವ್ಯವಸ್ಥಾಪಕರು ಹಾಗೂ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದ ಟ್ರಸ್ಟಿ ರಾಮ ಮೋಹನ ರಾಜ್‌ ತಿಳಿಸಿದರು.

blank

ಈ ವಿಶೇಷ ಅಲಂಕಾರವನ್ನು ಕಂಡು ಸಂಸದ ತೇಜಸ್ವೀ ಸೂರ್ಯ ಶ್ಲಾಘಿಸಿದರು. ಲಕ್ಷಾಂತರ ರೂಪಾಯಿಗಳನ್ನು ಖರ್ಚುಗೊಳಿಸಿ ಹಾಳಾಗುವಂತಹ ವಸ್ತುಗಳನ್ನು ಬಳಸಿ ಆಲಂಕಾರ ಮಾಡಿದರೆ ಅದರಿಂದ ಉಪಯೋಗವಾಗುವುದಿಲ್ಲ. ಇಂತಹ ವಿಭಿನ್ನ ಆಲೋಚನೆಯಿಂದಾಗಿ ಅಲಂಕಾರವೂ ಆಗುತ್ತದೆ ಹಾಗೆಯೇ ನಂತರ ಅದರ ಸದುಯೋಗವೂ ಆಗುತ್ತದೆ. ಈ ನಿಟ್ಟಿನಲ್ಲಿ ವಿಭಿನ್ನ ಆಲೋಚನೆ ಮಾಡಿರುವ ಮಾಜಿ ಉಪಮಹಾಪೌರರಾದ ರಾಮ ಮೋಹನ ರಾಜ್‌ ಅವರ ಕಾರ್ಯ ಶ್ಲಾಘನೀಯ ಎಂದರು.

blank

ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತೆ ಕವಿತಾ ಮಾತನಾಡಿ, ಲಾಕ್‌ಡೌನ್​​ನಲ್ಲಿ ಮನೆಯಿಂದ ಹೊರಗೆ ಹೋಗದೆ ಬಹಳಷ್ಟು ಬೇಸರಕ್ಕೀಡಾಗಿದ್ದೇವು. ಲಾಕ್‌ಡೌನ್‌ ಸಡಲಿಕೆಗೊಂಡ ನಂತರ ಇಂತಹ ವಿಭಿನ್ನ ಆಲೋಚನೆಯ ಅಲಂಕಾರ ಮಾಡಿರುವ ದೇವಸ್ಥಾನಕ್ಕೆ ಭೇಟಿ ನೀಡದ್ದು ಸಂತಸವಾಯಿತು ಎಂದು ಹೇಳಿದರು.

The post ಗುರು ಪೂರ್ಣಿಮೆ ವಿಶೇಷ: 3 ಲಕ್ಷ ಮಾತ್ರೆ, 10,000 ಮಾಸ್ಕ್​ ಮೂಲಕ ಸಾಯಿ ಬಾಬಾಗೆ ವಿಶೇಷ ಅಲಂಕಾರ​ appeared first on News First Kannada.

Source: newsfirstlive.com

Source link