ಮೆಟ್ರೋ ನಿಲ್ದಾಣದಿಂದ ಹಾರಿ ಆತ್ಮಹತ್ಯೆಗೆ ಯತ್ನ; ಕಾರಣ ಏನು ಗೊತ್ತಾ?

ಮೆಟ್ರೋ ನಿಲ್ದಾಣದಿಂದ ಹಾರಿ ಆತ್ಮಹತ್ಯೆಗೆ ಯತ್ನ; ಕಾರಣ ಏನು ಗೊತ್ತಾ?

ನವದೆಹಲಿ: ಫರಿದಾಬಾದ್​ ಮೆಟ್ರೋ ನಿಲ್ದಾಣದಿಂದ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದ ಯುವತಿಯೋರ್ವಳನ್ನು ಪೊಲೀಸ್​​ ಸಿಬ್ಬಂದಿ ರಕ್ಷಿಸಿದ್ದಾರೆ. ಕೆಲಸದ ಒತ್ತಡದಿಂದ ತೀವ್ರ ಕೋಪಗೊಂಡ ಯುವತಿ ಸೆಕ್ಟರ್ 28ರ ಮೆಟ್ರೋ ನಿಲ್ದಾಣದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಕೂಡಲೇ ಎಚ್ಚೆತ್ತ ಪೊಲೀಸ್​​ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಯುವತಿ ಜೀವ ಉಳಿಸಿದ್ದಾರೆ.

ಇನ್ನು, ಪೊಲೀಸರು ಯುವತಿ ಜೀವವನ್ನು ಉಳಿಸುತ್ತಿರುವ ವಿಡಿಯೋ ಮೊಬೈಲಿನಲ್ಲಿ ಸೆರೆಯಾಗಿದೆ. ಯುವತಿ ರಕ್ಷಣೆ ವೇಳೆ ಮೆಟ್ರೋ ನಿಲ್ದಾಣದ ಬಳಿ ಅಪಾರ ಪ್ರಮಾಣದಲ್ಲಿ ಜನ ನೆರೆದಿದ್ದರು. ಹೀಗಾಗಿ ಅರ್ಧ ಗಂಟೆಗಳ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು ಎನ್ನಲಾಗಿದೆ.

ಯುವತಿಯನ್ನು ಪೊಲೀಸರು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ. ಜತೆಗೆ ಈ ಸಂಬಂಧ ಫರಿದಾಬಾದ್​​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

The post ಮೆಟ್ರೋ ನಿಲ್ದಾಣದಿಂದ ಹಾರಿ ಆತ್ಮಹತ್ಯೆಗೆ ಯತ್ನ; ಕಾರಣ ಏನು ಗೊತ್ತಾ? appeared first on News First Kannada.

Source: newsfirstlive.com

Source link