ಕೊರೊನಾ ಇಳಿಕೆ – ಇಂದು 1,001 ಹೊಸ ಪ್ರಕರಣ, 22 ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಇಂದು ರಾಜ್ಯದಲ್ಲಿ 1,001 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 22 ಜನ ಸಾವನ್ನಪ್ಪಿದ್ದಾರೆ. ಕೋವಿಡ್-19 ಸೋಂಕು ಹರಡುವಿಕೆ ಪ್ರಮಾಣ ಶೇ.0.68ಕ್ಕೆ ಇಳಿಕೆಯಾಗಿದೆ.

ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಇಳಿಕೆಯಾಗಿದ್ದು, 165 ಪ್ರಕರಣಗಳು ದಾಖಲಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. 1,465 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ 23,419 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ರಾಜ್ಯದಲ್ಲಿ ಇದುವರೆಗೂ 28,94,557 ಪ್ರಕರಣಗಳು ವರದಿಯಾಗಿದ್ದು, 36,374 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಮರಣ ಪ್ರಮಾಣ ಶೇ.2.19ರಷ್ಟಿದೆ. ಇಂದು ಒಟ್ಟು 1,46,988 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.

blank

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 6, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು ನಗರ 165, ಬೀದರ್ 1, ಚಾಮರಾಜನಗರ 5, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 62, ಚಿತ್ರದುರ್ಗ 15, ದಕ್ಷಿಣ ಕನ್ನಡ 115, ದಾವಣಗೆರೆ 1, ಧಾರವಾಡ 6, ಗದಗ 5, ಹಾಸನ 90, ಹಾವೇರಿ 4, ಕಲಬುರಗಿ 4, ಕೊಡಗು 63, ಕೋಲಾರ 25, ಕೊಪ್ಪಳ 2, ಮಂಡ್ಯ 35, ಮೈಸೂರು 97, ರಾಯಚೂರು 0, ರಾಮನಗರ 7, ಶಿವಮೊಗ್ಗ 51, ತುಮಕೂರು 42, ಉಡುಪಿ 110, ಉತ್ತರ ಕನ್ನಡ 54, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

The post ಕೊರೊನಾ ಇಳಿಕೆ – ಇಂದು 1,001 ಹೊಸ ಪ್ರಕರಣ, 22 ಸಾವು appeared first on Public TV.

Source: publictv.in

Source link