ಅಭಿನಯ ಶಾರದೆ ಜಯಂತಿ ನಿಧನಕ್ಕೆ ಸಿಎಂ ಸೇರಿದಂತೆ ಗಣ್ಯರ ಸಂತಾಪ

ಅಭಿನಯ ಶಾರದೆ ಜಯಂತಿ ನಿಧನಕ್ಕೆ ಸಿಎಂ ಸೇರಿದಂತೆ ಗಣ್ಯರ ಸಂತಾಪ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಜಯಂತಿ ಅವರು ಇಂದು ಕೊನೆಯುಸಿರೆಳೆದಿದ್ದು, ಖ್ಯಾತ ನಟಿಯ ಸಾವಿಗೆ ಸಿಎಂ ಬಿಎಸ್​ ಯಡಿಯೂರಪ್ಪ, ಸಚಿವ ಬಿ.ಸಿ ಪಾಟೀಲ್, ನಟ ಜಗ್ಗೇಶ್​, ನಿರ್ದೇಶಕ ಪವನ್ ಒಡೆಯರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಸಿಎಂ ಬಿಎಸ್​​ವೈ, ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

The post ಅಭಿನಯ ಶಾರದೆ ಜಯಂತಿ ನಿಧನಕ್ಕೆ ಸಿಎಂ ಸೇರಿದಂತೆ ಗಣ್ಯರ ಸಂತಾಪ appeared first on News First Kannada.

Source: newsfirstlive.com

Source link