ಹೈಕಮಾಂಡ್ ಒತ್ತಡವಿರಲಿಲ್ಲ, ಸ್ವಯಂ ರಾಜೀನಾಮೆ ನೀಡಿದ್ದೇನೆ, ರಾಜ್ಯಪಾಲರ ಹುದ್ದೆ ಅಲಂಕರಿಸಲ್ಲ, ಪಕ್ಷ ಸಂಘಟನೆ ಮಾಡುತ್ತೇನೆ: ಬಿಎಸ್‌ವೈ..!

ಬೆಂಗಳೂರು: ರಾಜೀನಾಮೆ ನೀಡುವಂತೆ ದೆಹಲಿಯಿಂದ ನನಗೆ ಯಾವುದೇ ಒತ್ತಡ ಇಲ್ಲ ನಾನೇ ಸ್ವಯಂ ನಿರ್ಧಾರ ಮಾಡಿ ರಾಜೀನಾಮೆ ನೀಡಿದ್ದೇನೆ, ರಾಜ್ಯಪಾಲು ಹುದ್ದೆ ಸೇರಿ ಯಾವುದೇ ಸ್ಥಾನಮಾನ ಪಡೆಯದೇ ಪಕ್ಷ ಸಂಘಟಿಸುವ ಕೆಲಸ ಮಾಡುತ್ತೇನೆ ಎಂದು ಉಸ್ತುವಾರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ರಾಜಭವನದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಎರಡು ವರ್ಷ ತುಂಬಿದ ಈ ಸಂದರ್ಭದಲ್ಲಿ ರಾಜೀನಾಮೆ ಕೊಟ್ಟು ಬೇರೆಯವರಿಗೆ ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಅವಕಾಶ ಸಿಗಬೇಕು ಎಂದು ನಾನು ಸ್ವಯಂ ಪ್ರೇರಿತವಾಗಿ ರಾಜೀನಾಮೆ ಕೊಟ್ಟಿದ್ದೇನೆ ಇದಕ್ಕೆ ಪ್ರಧಾನಿಯಾಗಲಿ ಆಗಲಿ, ವರಿಷ್ಠರಾಗಲಿ ನನ್ನ ಮೇಲೆ ಯಾವುದೇ ಒತ್ತಡ ಹೇರಿಲ್ಲ ಇದು ನನ್ನ ಸ್ವಂತ ನಿರ್ಧಾರ ಎಂದರು.

ಮುಂದೆ ಯಾರು ಮುಖ್ಯಮಂತ್ರಿ ಯಾರಾಗಬೇಕು? ಎಂದು ನಾನು ಯಾವುದೇ ಹೆಸರನ್ನು ಪ್ರಸ್ತಾಪ ಮಾಡುವುದಿಲ್ಲ ಅದು ಹೈಕಮಾಂಡಿಗೆ ಬಿಟ್ಟಿದ್ದು. ಅವರು ಯಾರನ್ನು ಮುಖ್ಯಮಂತ್ರಿ ಮಾಡುತ್ತಾರೋ ಅವರಿಗೆ ಎಲ್ಲ ರೀತಿಯ ಸಹಕಾರ ಕೊಡುತ್ತೇನೆ . ನಾವೆಲ್ಲರೂ ಒಟ್ಟಾಗಿ ಸೇರಿ ಕರ್ನಾಟಕದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ಕೆಲಸ ಮಾಡುತ್ತೇವೆ ಎಂದರು.

ಪಕ್ಷ ನನಗೆ ಎಲ್ಲ ರೀತಿಯ ಸ್ಥಾನಮಾನ ಕೊಟ್ಟಿದೆ. ನಾಲ್ಕು ಬಾರಿ ಮುಖ್ಯಮಂತ್ರಿ ಮಾಡಿದೆ. ಪಕ್ಷದ ಅಧ್ಯಕ್ಷ ಸ್ಥಾನ ಕೊಟ್ಟಿದೆ‌ ಹಾಗಾಗಿ ಪಕ್ಷದ ಕೆಲಸವನ್ನು ಮಾಡುತ್ತೇನೆ.ನಾನು ಯಾವುದೇ ಕಾರಣಕ್ಕೂ ಯಾವುದೇ ಸ್ಥಾನಮಾನ ಪಡೆಯುವುದಿಲ್ಲ.ಹುಂದೆ ವಾಜಪೇಯಿ ಕಾಲದಲ್ಲಿ ಕೇಂದ್ರಕ್ಕೆ ಸಚಿವನಾಗಲು ಆಹ್ವಾನಿಸಿದ್ದರು ನಾನು ಒಪ್ಪಿರಲಿಲ್ಲ.ಈಗಲೂ ರಾಜ್ಯಪಾಲನಾಗುವುದಿಲ್ಲ. ಪಕ್ಷದ ಸಂಘಟನೆ ಬಲಪಡಿಸುವ ಕೆಲಸ ಮಾಡುತ್ತೇನೆ ಯಾವುದೇ ಸ್ಥಾನಮಾನ ಕೇಳಿಲ್ಲ ಯಾವುದೇ ಸ್ಥಾನಮಾನ ತೆಗೆದುಕೊಳ್ಳುವುದಿಲ್ಲ ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸಲು ಕೆಲಸ ಮಾಡುತ್ತೇನೆ ಎಂದು ನಿರ್ಗಮಿತ ಸಿಎಂ ತಿಳಿಸಿದರು.

ಮುಂದೆ ಬರುವ ಮುಖ್ಯಮಂತ್ರಿಗಳು ಸಹ ಯಾರು ಸರ್ಕಾರ ಬರಲು ಅವಕಾಶ ಕೊಟ್ಟಿದ್ದರೋ ಅವರೆಲ್ಲರಿಗೂ ಸಹಕಾರ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ವಲಸಿಗರಿ ಭಯಪಡಬೇಕಿಲ್ಲ ಎಂದು ಯಡಿಯೂರಪ್ಪ ಅಭಯ ನೀಡಿದರು. ಎಲ್ಲರೂ ಜವಾಬ್ದಾರ ಹೊತ್ತು ಕೆಲಸ ಮಾಡಲಿದ್ದಾರೆ ಮುಂದೆ ಬರುವ ಮುಖ್ಯಮಂತ್ರಿಗಳು ಎಲ್ಲಾ ರೀತಿಯ ಸಹಕಾರ ಕೊಡಲಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾಗೆ ಕೃತಜ್ಞತೆ ಸಲ್ಲಿಸುತ್ತೇನೆ 75 ವರ್ಷ ದಾಟಿದವರಿಗೆ ಇಡೀ ದೇಶದಲ್ಲಿ ಯಾರಿಗೂ ಯಾವುದೇ ಸ್ಥಾನಮಾನ ಕೊಟ್ಟಿಲ್ಲ ಆದರೆ ಯಡಿಯೂರಪ್ಪನ ಮೇಲೆ ಅಭಿಮಾನ ಇಟ್ಟು ನಮ್ಮ ರಾಷ್ಟ್ರೀಯ ನಾಯಕರು ನನಗೆ ಎರಡು ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರೆಯಲು ಅವಕಾಶ ಮಾಡಿಕೊಟ್ಟಿದ್ದರು ಅದಕ್ಕಾಗಿ ನಮ್ಮ ಶಾಸಕರು ಸಚಿವ ಸಂಪುಟ ಸಹೋದ್ಯೋಗಿಗಳು ರಾಜ್ಯದ ಜನತೆಯ ಪರವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ, ಅಮಿತ್ ಶಾ ನಡ್ಡಾರವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಎರಡು ತಿಂಗಳ ಹಿಂದೆ ರಾಜೀನಾಮೆಗೆ ನಿರ್ಧಾರ ಮಾಡಿದ್ದೆ ಆದರೆ ಎರಡು ವರ್ಷ ತುಂಬಿದ ಈ ಸಂದರ್ಭದಲ್ಲಿ ರಾಜೀನಾಮೆ ಕೊಡುವುದು ಸೂಕ್ತ ಎಂದು ಯೋಚನೆ ಮಾಡಿ ನಾನು ಇಂದು ರಾಜೀನಾಮೆಯನ್ನು ರಾಜ್ಯಪಾಲರಿಗೆ ಕೊಟ್ಟಿದ್ದೇನೆ ರಾಜ್ಯಪಾಲರು ಅಂಗೀಕರಿಸಿದ್ದಾರೆ. ರಾಜ್ಯದ ಜನತೆ ನನಗೆ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಮಾಡುವ ಅವಕಾಶ ಮಾಡಿಕೊಟ್ಟಿದ್ದಾರೆ. ರಾಜ್ಯದ ಜನತೆಗೆ, ರಾಜ್ಯದ ಕಾರ್ಯಕರ್ತರಿಗೆ, ಶಿಕಾರಿಪುರ ಮತದಾರರು ಏಳು ಬಾರಿ ಶಾಸಕರಾಗಿ ಮುಖ್ಯಮಂತ್ರಿಯಂತಹ ಉನ್ನತ ಸ್ಥಾನಕ್ಕೆ ಹೋಗಲು ಅವಕಾಶ ಮಾಡಿಕೊಟ್ಟರು ಹಾಗಾಗಿ ನನ್ನ ಕ್ಷೇತ್ರದ ಜನತೆಯನ್ನೂ ನಾನು ಜೀವನದಲ್ಲಿ ಮರೆಯಲು ಸಾಧ್ಯವಿಲ್ಲ ಅವರಿಗೂ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದರು.

The post ಹೈಕಮಾಂಡ್ ಒತ್ತಡವಿರಲಿಲ್ಲ, ಸ್ವಯಂ ರಾಜೀನಾಮೆ ನೀಡಿದ್ದೇನೆ, ರಾಜ್ಯಪಾಲರ ಹುದ್ದೆ ಅಲಂಕರಿಸಲ್ಲ, ಪಕ್ಷ ಸಂಘಟನೆ ಮಾಡುತ್ತೇನೆ: ಬಿಎಸ್‌ವೈ..! appeared first on Public TV.

Source: publictv.in

Source link