ಹೆತ್ತವರಿಗೆ ಹೆಗ್ಗಣ ಮುದ್ದು ಎಂಬಂತೆ ನಡ್ಡಾಗೆ ಯಡಿಯೂರಪ್ಪನವರೇ ಉತ್ತಮ ಸಿಎಂ-ಸಿದ್ದರಾಮಯ್ಯ

ಹೆತ್ತವರಿಗೆ ಹೆಗ್ಗಣ ಮುದ್ದು ಎಂಬಂತೆ ನಡ್ಡಾಗೆ ಯಡಿಯೂರಪ್ಪನವರೇ ಉತ್ತಮ ಸಿಎಂ-ಸಿದ್ದರಾಮಯ್ಯ

ಬೆಂಗಳೂರು: ಬಿ.ಎಸ್​ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಹೆತ್ತವರಿಗೆ ಹೆಗ್ಗಣ ಮುದ್ದು ಎಂಬ ಗಾದೆ ಮಾತಿನಂತೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರಿಗೆ ಯಡಿಯೂರಪ್ಪನವರೆ  ಉತ್ತಮ ಮುಖ್ಯಮಂತ್ರಿಯಾಗಿ ಕಂಡಿದ್ದಾರೆ. ಸ್ವತಃ ಬಿಜೆಪಿ ಶಾಸಕರೇ ಯಡಿಯೂರಪ್ಪನವರ ಕುಟುಂಬ ಸರ್ಕಾರದ ಖಜಾನೆಯನ್ನು ಲೂಟಿ ಮಾಡುತ್ತಿದೆ ಅಂದಿದ್ದಾರೆ, ಇದಕ್ಕಿಂತ ಬೇರೆ ಸಾಕ್ಷಿ ಬೇಕಾ?

ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ? ಅದರ ಬದಲು ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಿದರೆ ಜನ ನೆಮ್ಮದಿಯ ಬದುಕು ನಡೆಸುವಂತಾಗುತ್ತದೆ. ಎಂದು ಟ್ವೀಟ್​ ಮಾಡಿದ್ದಾರೆ.

The post ಹೆತ್ತವರಿಗೆ ಹೆಗ್ಗಣ ಮುದ್ದು ಎಂಬಂತೆ ನಡ್ಡಾಗೆ ಯಡಿಯೂರಪ್ಪನವರೇ ಉತ್ತಮ ಸಿಎಂ-ಸಿದ್ದರಾಮಯ್ಯ appeared first on News First Kannada.

Source: newsfirstlive.com

Source link