ಜೊಲ್ಲೆ ಮೊಟ್ಟೆ ಡೀಲ್; ರಾಜ್ಯದ ವಿವಿಧೆಡೆ ಪ್ರತಿಭಟನೆ

ಜೊಲ್ಲೆ ಮೊಟ್ಟೆ ಡೀಲ್; ರಾಜ್ಯದ ವಿವಿಧೆಡೆ ಪ್ರತಿಭಟನೆ

ಬೆಳಗಾವಿ: ಸಚಿವೆ ಶಶಿಕಲಾ ಜೊಲ್ಲೆ ಮೊಟ್ಟೆ ಡೀಲ್ ಪ್ರಕರಣಕ್ಕ ಸಂಬಂಧಿಸಿ ಇಂದು ಚಿಕ್ಕೋಡಿ ಪಟ್ಟಣದಲ್ಲಿ ಯೂಥ್ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.

ಚಿಕ್ಕೋಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು, ಮೊಟ್ಟೆ ಭ್ರಷ್ಟಾಚಾರದಲ್ಲಿ ತೊಡಗಿದ ಸಚಿವೆಯನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಮೊಟ್ಟೆ ಕಳ್ಳಿ ಶಶಿಕಲಾ ಜೊಲ್ಲೆಗೆ ಧಿಕ್ಕಾರ ಎಂದು ಕೂಗಿದ ಕಾರ್ಯಕರ್ತರು ಜೊಲ್ಲೆ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

blank

ಕಲಬುರಗಿ: ನಗರದಲ್ಲಿ ಜೊಲ್ಲೆ ಮೊಟ್ಟೆ ಡೀಲ್​ ಕುರಿತು ಜೆಡಿಎಸ್ ಮುಖಂಡ ಸಂಜೀವನ್ ಯಾಕಾಪುರ ಅಕ್ರೋಶ ವ್ಯಕ್ತಪಡಿಸಿದ್ದು ಬಡ ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರದಲ್ಲಿ ಸಚಿವೆ ಅಕ್ರಮ ಮಾಡಿರೋದು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ.

ಪ್ರಕರಣ ಬಯಲಿಗೆಳೆದ ನ್ಯೂಸ್​ಫಸ್ಟ್​ಗೆ ಅಭಿನಂದನೆ ಸಲ್ಲಿಸಿದ ಅವರು ಸಚಿವೆ ಜೊಲ್ಲೆ ನೈತಿಕ ಹೊಣೆಹೊತ್ತು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

blank

ನ್ಯೂಸ್ ಫಸ್ಟ್ ಅಕ್ರಮ ಬಯಲಿಗೆಳೆದು ಮೂರು ದಿನವಾಗಿದೆ. ರಾಜ್ಯದಾದ್ಯಂತ ಜನ ಹೊರಾಟ ಮಾಡ್ತಿದ್ರು ರಾಜಿನಾಮೆ ಕೊಡದೆ ಇರೋದು ವಿಪರ್ಯಾಸ. ಹೀಗಾಗಿ ನೈತಿಕ ಹೊಣೆ ಹೊತ್ತು ಶಾಸಕ ಪರಣ್ಣ ಮುನವಳ್ಳಿ ಮತ್ತು ಸಚಿವೆ ಜೊಲ್ಲೆ ಕೂಡಲೇ ರಾಜೀನಾಮೆ ನೀಡಬೇಕು ಇಲ್ಲವಾದಲ್ಲಿ ರಾಜ್ಯದಾದ್ಯಂತ ಹೋರಾಟ ಮಾಡುವದಾಗಿ ಎಚ್ಚರಿಸಿದ್ದಾರೆ.

ದಕ್ಷಿಣ ಕನ್ನಡ: ಅಂಗನವಾಡಿ ಮಕ್ಕಳ ಮೊಟ್ಟೆ ಪರಕರಣದಲ್ಲಿ ಭ್ರಷ್ಟಾಚಾರ ಆರೋಪ ಹೊತ್ತಿರುವ ಸಚಿವೆ ಶಶಿಕಲಾ ಜೊಲ್ಲೆ ರಾಜೀನಾಮೆಗೆ ಒತ್ತಾಯಿಸಿ ಮಂಗಳೂರಿನಲ್ಲಿ ಎನ್‍ಎಸ್‍ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಸೇರಿದ ಎನ್‍ಎಸ್‍ಯುಐ ಕಾರ್ಯಕರ್ತರು ಸಚಿವೆ ಶಶಿಕಲಾ ಜೊಲ್ಲೆ ಅವರ ವಿರುದ್ಧ ಘೋಷಣೆ ಕೂಗಿ, ಅವರ ಭಾವಚಿತ್ರಕ್ಕೆ ಮೊಟ್ಟೆ ಎಸೆದು, ಅವರ ಭಾವಚಿತ್ರದಹಿಸುವ ಮೂಲಕ ಎನ್‍ಎಸ್‍ಯುಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

blank

ಒಂದೆಡೆ ಪ್ರಧಾನಿ ಮೋದಿಯವರು ನಾನು ತಿನ್ನುವುದಿಲ್ಲ, ತಿನ್ನುವವರನ್ನು ಬಿಡುವುದಿಲ್ಲ ಎಂದು ಹೇಳಿದರೆ, ಅದಕ್ಕೆ ತದ್ವಿರುದ್ಧವಾಗಿ ಮಕ್ಕಳ ಅಪೌಷ್ಠಿಕತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ನೀಡಲಾಗುವ ಆಹಾರದಲ್ಲೂ  ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ.
ಕೇವಲ ಹಗರಣಕ್ಕಾಗಿ ಮಾತ್ರವೇ ಅಧಿಕಾರಕ್ಕೆ ಬಂದಂತಹ ಬಿಜೆಪಿ ಸರಕಾರದ ವಿರುದ್ಧ ಜನತೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ. ಸಚಿವೆ ಶಶಿಕಲಾ ಜೋಲ್ಲೆ ರಾಜೀನಾಮೆ ನೀಡುವ ವರೆಗೂ ಹೋರಾಟ ಮುಂದುವೆರೆಯಲಿದೆ ಎಂದು ಎನ್‍ಎಸ್‍ಯುಐ ಕಾರ್ಯಕರ್ತರು ಎಚ್ಚರಿಸಿದ್ದಾರೆ.

The post ಜೊಲ್ಲೆ ಮೊಟ್ಟೆ ಡೀಲ್; ರಾಜ್ಯದ ವಿವಿಧೆಡೆ ಪ್ರತಿಭಟನೆ appeared first on News First Kannada.

Source: newsfirstlive.com

Source link