#ಅಚ್ಚರಿ..! ಯಡಿಯೂರಪ್ಪ ಪಕ್ಷಾತೀತ ನಾಯಕ ಎಂದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

#ಅಚ್ಚರಿ..! ಯಡಿಯೂರಪ್ಪ ಪಕ್ಷಾತೀತ ನಾಯಕ ಎಂದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ಎಸ್​​ ಯಡಿಯೂರಪ್ಪ ಕುರಿತು ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಯಡಿಯೂರಪ್ಪ ಅವರಿಗೆ ರಾಜಕೀಯದಲ್ಲಿ 50 ವರ್ಷ ಅನುಭವ ಇದೆ. ಬಿಜೆಪಿ ಕಟ್ಟಿ ಬೆಳೆಸಿದ್ದ ಬಿ ಎಸ್ ಯಡಿಯೂರಪ್ಪ ಭಾವುಕರಾಗಿ ಭಾಷಣ ಮಾಡಿದರು. ಆಗ ಒಂದು ಕ್ಷಣ ಯಡಿಯೂರಪ್ಪ ಯುಗಾಂತ್ಯವಾಯ್ತು ಎಂದು ಅನಿಸಿತು ಎಂದರು.

ಮುಂದಿನ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್​ ಬಿಜೆಪಿ ಬೆಳವಣಿಗೆಯನ್ನು ಕಾತುರದಿಂದ ನೋಡುತ್ತಿದೆ. ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುತ್ತೇ‌ನೆ. ಇವರ ಹೋರಾಟ, ಧೈರ್ಯದ ಬಗ್ಗೆ ಅಭಿಮಾನ ಇದೆ. ಯಡಿಯೂರಪ್ಪಗೆ ಅವಧಿ ಪೂರ್ಣ ಮಾಡಲು ಅವಕಾಶ ನೀಡದಿರುವುದು ಬಿಜೆಪಿ ಪಕ್ಷದ ಆಂತರಿಕ ವಿಚಾರ ಎಂದು ಹೇಳಿದರು.

ಯಡಿಯೂರಪ್ಪ ಪಕ್ಷಾತೀತವಾಗಿ ಲೆಜೆಂಡ್ ನಾಯಕ. ದುಖಃದಿಂದ ರಾಜೀನಾಮೆ ನೀಡಬಾರದಿತ್ತು ಎಂಬುದು ನಮ್ಮ ಅಭಿಪ್ರಾಯ. ರಾಜ್ಯದಲ್ಲಿ ಕೋವಿಡ್, ಪ್ರವಾಹ ಪರಿಸ್ಥಿತಿ ಇದೆ. ಇಂತಹ ಸಂದರ್ಭಗಳಲ್ಲಿ ರಾಜಕೀಯ ಬೆಳವಣಿಗೆ ಸರಿಯಲ್ಲ. ಜನರ ಕಾಳಜಿಗಿಂತ ರಾಜಕೀಯ ಮುಖ್ಯವಾಗಿದ್ದು ಸರಿಯಲ್ಲ. ಇಂತಹ ಸಂದರ್ಭಗಳಲ್ಲಿ ಈ ಬೆಳವಣಿಗೆ ಅವಶ್ಯಕತೆ ಇತ್ತಾ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ನಿರ್ಗಮನಕ್ಕೂ ಮುನ್ನ ಸರ್ಕಾರಿ ನೌಕರರಿಗೆ ಗುಡ್​ನ್ಯೂಸ್ ಕೊಟ್ಟ ಬಿಎಸ್​ವೈ

ಯಡಿಯೂರಪ್ಪ ಬದಲಾವಣೆ ಕುರಿತು ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಬೇಕು. ಇದರಿಂದ ಆಡಳಿತದ ಮೇಲೆ ಪರಿಣಾಮ ಬೀರಲಿದೆ. ಆಡಳಿತಕ್ಕಿಂತ ಬಿಜೆಪಿ ರಾಜಕೀಯ ಮುಖ್ಯ ಎಂದು ಅನಿಸುತ್ತದೆ ಎಂದು ಕುಟುಕಿದರು.

The post #ಅಚ್ಚರಿ..! ಯಡಿಯೂರಪ್ಪ ಪಕ್ಷಾತೀತ ನಾಯಕ ಎಂದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ appeared first on News First Kannada.

Source: newsfirstlive.com

Source link