ಕೇಂದ್ರ ರೈಲ್ವೆಯಲ್ಲಿ ಉದ್ಯೋಗಾವಕಾಶ: ಅರ್ಜಿ ಆಹ್ವಾನ

ಕೇಂದ್ರ ರೈಲ್ವೆಯಲ್ಲಿ ಉದ್ಯೋಗಾವಕಾಶ: ಅರ್ಜಿ ಆಹ್ವಾನ

ನವದೆಹಲಿ: ನೈಋತ್ಯ ರೈಲ್ವೆಯಲ್ಲಿ ಕೆಲವು ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಸದ್ಯದಲ್ಲೇ ಭರ್ತಿ ಮಾಡಲಿದ್ದು, ಆಸಕ್ತರು ಅರ್ಜಿ ಸಲ್ಲಿಸಲು ನಾಳೆ ಅಂದರೆ ಜುಲೈ 27 ಕೊನೆಯ ದಿನವಾಗಿದೆ.

ಇನ್ನೂ, ಹುದ್ದೆಗಳಿಗೆ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಆದ್ಯತೆ ಮೇರೆಗೆ ನಾಳೆಯೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೈಋತ್ಯ ರೈಲ್ವೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಡಿಪ್ಲೋಮಾ ಮತ್ತು ಸ್ನಾತಕೋತ್ತರ ಪದವೀಧರ ಆಗಿರಬೇಕು. ಕೆಲವು ಹುದ್ದೆಗಳಿಗೆ 28ನೇ ತಾರೀಕಿನವರೆಗೂ ಅವಕಾಶ ನೀಡಲಾಗಿದ್ದು, ಅನುಭವದ ಆಧಾರದ ಮೇರೆಗೆ ಕೆಲಸ ನೀಡಲಾಗುವುದು.

ಇದನ್ನೂ ಓದಿ: ‘ಷಡ್ಯಂತ್ರ ಬಾಣಗಳ ಹಾಸಿಗೆಯಲ್ಲಿ ಯಶಸ್ವಿಯಾಗಿ ಭೀಷ್ಮನನ್ನು ಮಲಗಿಸಿಬಿಟ್ಟಿರಿ’ ಕಾಂಗ್ರೆಸ್​​ ಕಿಡಿ

ಅಭ್ಯರ್ಥಿಗಳು ಕಡ್ಡಾಯವಾಗಿ ಪರೀಕ್ಷೆ ಬರೆಯಬೇಕು. ಸರಿಯಾದ ಸಮಯಕ್ಕೆ ಸಂದರ್ಶನಕ್ಕೆ ಹಾಜರಾಗಬೇಕು ಎಂದು ತಿಳಿಸಲಾಗಿದೆ.

The post ಕೇಂದ್ರ ರೈಲ್ವೆಯಲ್ಲಿ ಉದ್ಯೋಗಾವಕಾಶ: ಅರ್ಜಿ ಆಹ್ವಾನ appeared first on News First Kannada.

Source: newsfirstlive.com

Source link