ಸಾವಿನಲ್ಲೂ ಸಾರ್ಥಕತೆ ಮೆರೆದ ಜಯಂತಿ; ಡಾ.ರಾಜ್ ಕುಮಾರ್ ಐ ಬ್ಯಾಂಕ್​​ಗೆ ಕಣ್ಣುಗಳ ದಾನ

ಸಾವಿನಲ್ಲೂ ಸಾರ್ಥಕತೆ ಮೆರೆದ ಜಯಂತಿ; ಡಾ.ರಾಜ್ ಕುಮಾರ್ ಐ ಬ್ಯಾಂಕ್​​ಗೆ ಕಣ್ಣುಗಳ ದಾನ

ವಯೋಸಹಜ ಕಾಯಿಲೆಯಿಂದ ಇಂದು ವಿಧಿವಶರಾದ ಜಯಂತಿ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ನಾರಾಯಣ ನೇತ್ರಾಲಯದ ಡಾ.ರಾಜ್ ಕುಮಾರ್ ಐ ಬ್ಯಾಂಕ್​​ಗೆ ತಮ್ಮ ಕಣ್ಣುಗಳನ್ನ ದಾನ ಮಾಡಿದ್ದಾರೆ.

ಸಾವಿನಲ್ಲೂ ಸಾರ್ಥಕತೆ ಮೆರೆದ ಜಯಂತಿ ಅವರ ಮಾನವೀಯ ಗುಣಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಯುವುದಕ್ಕೂ ಮೊದಲು ಅವರು ಕಣ್ಣುಗಳನ್ನು ದಾನ ಮಾಡುವ ನಿರ್ಧಾರಕ್ಕೆ ಬಂದಿದ್ದರು. ಅದರಂತೆ ಈಗ ಅವರ ಕಣ್ಣುಗಳನ್ನು ದಾನ ಮಾಡಿ ಮಾದರಿಯಾಗಿದ್ದಾರೆ.

ಇದನ್ನೂ ಓದಿ: ಒನಕೆ ಓಬವ್ವ ಎಂದರೆ ತಕ್ಷಣ ನೆನಪಾಗೋದೇ ಅಭಿನಯ ಶಾರದೆ ಜಯಂತಿ

ಇನ್ನು ಜಯಂತಿ ಅವರ ಅಂತ್ಯಕ್ರಿಯೆ ಪೊಲೀಸ್ ಗೌರವ ಹಾಗೂ ಹಿಂದೂ ಸಂಪ್ರದಾಯದಂತೆ ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನೆರವೇರಿತು. ಜಯಂತಿ ಅವರ ಪುತ್ರ ಕೃಷ್ಣ ಕುಮಾರ್ ಅಂತಿಮ ವಿಧಿವಿಧಾನ ನೆರವೇರಿಸಿದರು.

ಇದನ್ನೂ ಓದಿ: ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ವಿಧಿವಶ

The post ಸಾವಿನಲ್ಲೂ ಸಾರ್ಥಕತೆ ಮೆರೆದ ಜಯಂತಿ; ಡಾ.ರಾಜ್ ಕುಮಾರ್ ಐ ಬ್ಯಾಂಕ್​​ಗೆ ಕಣ್ಣುಗಳ ದಾನ appeared first on News First Kannada.

Source: newsfirstlive.com

Source link