ಮುಂದಿನ ಮುಖ್ಯಮಂತ್ರಿ ಆಯ್ಕೆ; ಇಂದು ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಮುಂದಿನ ಮುಖ್ಯಮಂತ್ರಿ ಆಯ್ಕೆ; ಇಂದು ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಪ್ರಾರಂಭವಾಗಿದೆ. ಈ ಮಧ್ಯೆ 5-6 ನಾಯಕರ ಹೆಸರು ಕೇಳಿಬಂದಿವೆ. ಈ ಮಧ್ಯೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿದೆ.

ಇಂದು ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಈ ಹಿಂದೆ ಅಂದ್ರೆ ಕಳೆದ ಗುರುವಾರ ಸಚಿವ ಸಂಪುಟ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲೇ ಬಿಎಸ್​ವೈ ಮುಖ್ಯಮಂತ್ರಿಗಿರಿಗೆ ರಾಜೀನಾಮೆ ಘೋಷಿಸಲಿದ್ದಾರೆ ಎನ್ನಲಾಗಿತ್ತು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಸಚಿವ ಸಂಪುಟ ಸಭೆ ರದ್ದಾಯ್ತು.. ನಿನ್ನೆ ನಡೆದ ಸಾಧನಾ ಸಮಾವೇಶದಲ್ಲಿ ಬಿಸ್​ವೈ ರಾಜೀನಾಮೆ ಘೋಷಿಸಿದರು.

ಇದೀಗ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆಂಬ ಕುತೂಹಲ ಮೂಡಿರುವ ಮಧ್ಯದಲ್ಲೇ ಶಾಸಕಾಂಗ ಪಕ್ಷದ ಸಭೆ ಕರೆದಿರುವುದು ಕುತೂಹಲ ಮೂಡಿದೆ.

The post ಮುಂದಿನ ಮುಖ್ಯಮಂತ್ರಿ ಆಯ್ಕೆ; ಇಂದು ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ appeared first on News First Kannada.

Source: newsfirstlive.com

Source link