1,450 ಏಕರೆ ಭೂ ವಿವಾದ – ಮೈಸೂರು ರಾಜ ವಂಶಕ್ಕೆ ಗೆಲುವು

ಮೈಸೂರು: ಚಾಮುಂಡಿಬೆಟ್ಟ ತಪ್ಪಲಿನ ಕುರುಬಾರಹಳ್ಳಿ, ಆಲನಹಳ್ಳಿ, ಚೌಡಹಳ್ಳಿಯ ಭೂ ಮಾಲೀಕತ್ವ ವಿವಾದ ಸಂಬಂಧ ಮೈಸೂರಿನ ಹಿಂದಿನ ಡಿಸಿ ರೋಹಿಣಿ ಸಿಂಧೂರಿ ಹಾಗೂ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ಈ ಮೂರು ಸರ್ವೇ ನಂಬರ್ ಗಳಿಗೆ ಸೇರಿದ ಭೂಮಿ ಮಹಾರಾಜರ ಖಾಸಗಿ ಆಸ್ತಿಯೆಂದು ಹೈಕೋರ್ಟ್ ವಿಭಾಗೀಯ ಪೀಠ ಕಳೆದ ವರ್ಷ ತೀರ್ಪು ನೀಡಿತ್ತು. ಹೈಕೋರ್ಟ್ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಭೂ ಮಾಲೀಕರು ನ್ಯಾಯಾಂಗ ನಿಂದನೆ ಅರ್ಜಿ ಹಾಕಿದ್ದರು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೈಸೂರಿನ ಅಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೊರೆ ಹೋಗಿದ್ದರು. ಹಿರಿಯ ವಕೀಲರೊಬ್ಬರಿಗೆ ದುಬಾರಿ ಶುಲ್ಕ ನೀಡಿ ವಕಾಲತ್ತಿಗೆ ವಹಿಸಲಾಗಿತ್ತು. ಇದನ್ನೂ ಓದಿ: ರಾಜೀನಾಮೆ ಸುದ್ದಿ ಕೇಳಿ ಅಭಿಮಾನಿ ಆತ್ಮಹತ್ಯೆ – ಬಿಎಸ್‍ವೈ ಸಂತಾಪ

ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಇದು ವಿಚಾರಣೆಗೆ ಯೋಗ್ಯವಲ್ಲವೆಂದು ಮೇಲ್ಮನವಿ ತಿರಸ್ಕರಿಸಿದೆ. ಈ ಮೂಲಕ ಕಳೆದ ಎರಡು ದಶಕಗಳಿಂದ ಸರ್ಕಾರ ಮತ್ತು ಭೂ ಮಾಲೀಕರ ನಡುವೆ ನಡೆಯುತ್ತಿದ್ದ ಕಾನೂನು ಸಮರಕ್ಕೆ ತೆರೆ ಬಿದ್ದಂತಾಗಿದೆ. 3 ಸರ್ವೇ ನಂಬರ್ ಗಳಿಂದ 1450 ಎಕರೆಯಷ್ಟು ಇರೋ ಭೂಮಿ. ಈಗ ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶ ಎತ್ತಿಹಿಡಿದ ಹಿನ್ನೆಲೆಯಲ್ಲಿ ಮೈಸೂರು ಮಹಾರಾಜರ ಖಾಸಗಿ ಆಸ್ತಿ ಇದಾಗಿದೆ. ಇದನ್ನೂ ಓದಿ: ಅಸ್ಸಾಂ, ಮಿಜೊರಾಂ ಗಡಿಯಲ್ಲಿ ಹಿಂಸಾಚಾರ – ಐವರು ಪೊಲೀಸರು ಹುತಾತ್ಮ

The post 1,450 ಏಕರೆ ಭೂ ವಿವಾದ – ಮೈಸೂರು ರಾಜ ವಂಶಕ್ಕೆ ಗೆಲುವು appeared first on Public TV.

Source: publictv.in

Source link