ಅಶ್ಲೀಲ ಚಿತ್ರ ನಿರ್ಮಾಣ ಕೇಸ್; ನಟಿ ಶಿಲ್ಪಾ ಶೆಟ್ಟಿ ಪತಿಗೆ 14 ದಿನಗಳ ನ್ಯಾಯಾಂಗ ಬಂಧನ

ಅಶ್ಲೀಲ ಚಿತ್ರ ನಿರ್ಮಾಣ ಕೇಸ್; ನಟಿ ಶಿಲ್ಪಾ ಶೆಟ್ಟಿ ಪತಿಗೆ 14 ದಿನಗಳ ನ್ಯಾಯಾಂಗ ಬಂಧನ

ರಾಜ್​ ಕುಂದ್ರಾಗೆ ಸಂಕಷ್ಟ ಮುಂದುವರೆದಿದ್ದು ಪಾರ್ನ್ ಸಿನಿಮಾ ನಿರ್ಮಾಣ ಕೇಸ್​ಗೆ ಸಂಬಂಧಿಸಿದಂತೆ ಕೋರ್ಟ್​ ವಿಧಿಸಿದೆ. ಇಂದು ವಿಚಾರಣೆ ನಡೆಸಿದ ಮುಂಬೈ ಕೋರ್ಟ್​, ರಾಜ್​ ಕುಂದ್ರಾಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ನ್ಯಾಯಾಂಗ ಬಂಧನ ಬೆನ್ನಲ್ಲೇ, ಜಾಮೀನು ಅರ್ಜಿ ಸಲ್ಲಿಸಲು ಕೂಡ ರಾಜ್ ಕುಂದ್ರಾ ಮುಂದಾಗಿದ್ದಾರೆ.

ಇನ್ನು ಇದೇ ವೇಳೆ ಮಾಹಿತಿ ನೀಡಿರುವ ತನಿಖಾಧಿಕಾರಿಗಳು ರಾಜ್ ಕುಂದ್ರಾರ 2 ಬ್ಯಾಂಕ್​ ಅಕೌಂಟ್ ಸೀಜ್ ಮಾಡಿರೋ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಅಲ್ಲದೇ ಈ ಅಕೌಂಟ್​ಗಳಲ್ಲಿ ಒಟ್ಟು 1.14 ಕೋಟಿ ರೂಪಾಯಿ ಹಣ ಇರೋದಾಗಿಯೂ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನೊಂದೆಡೆ ಈ ಪ್ರಕರಣದಲ್ಲಿ ವಿಚಾರಣೆಗೆ ಸಮನ್ಸ್ ಪಡೆದಿರೋ ಮಾದಕ ನಟಿ ಶೆರ್ಲಿನ್ ಚೋಪ್ರಾ ಕೂಡ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

The post ಅಶ್ಲೀಲ ಚಿತ್ರ ನಿರ್ಮಾಣ ಕೇಸ್; ನಟಿ ಶಿಲ್ಪಾ ಶೆಟ್ಟಿ ಪತಿಗೆ 14 ದಿನಗಳ ನ್ಯಾಯಾಂಗ ಬಂಧನ appeared first on News First Kannada.

Source: newsfirstlive.com

Source link