ರಾಜ್ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನ

ಮುಂಬೈ: ಅಶ್ಲೀಲ ಸಿನಿಮಾಗಳ ನಿರ್ಮಾಣದ ಆರೋಪದಡಿಯಲ್ಲಿ ಬಂಧನದಲ್ಲಿರುವ ಉದ್ಯಮಿ, ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಕಿಲಾ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

ರಾಜ್ ಕುಂದ್ರಾ ಪರ ವಕೀಲರು, ಕಕ್ಷಿದಾರರು ಪೊಲೀಸ್ ವಿಚಾರಣೆಯನ್ನು ಎದುರಿಸಿದ್ದು, ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು. ಇತ್ತ ಮುಂಬೈ ಪೊಲೀಸರು ಆರೋಪಿಯನ್ನು ಇನ್ನು ಏಳು ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ರಾಜ್ ಕುಂದ್ರಾಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಏನಿದು ಪ್ರಕರಣ?:
ಜುಲೈ 19ರಂದು ರಾಜ್ ಕುಂದ್ರಾ ವಿಚಾರಣೆಗೆ ಆಗಮಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ಮಧ್ಯಾಹ್ನ 2 ಗಂಟೆಗೆ ರಾಜ್ ಕುಂದ್ರಾರನ್ನ ಪೊಲೀಸರು ಬಂಧಿಸಿದ್ದರು. ರಾಜ್ ಕುಂದ್ರಾ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಇನ್ನೂ ಹಲವರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬಂಧನದ ಬಳಿಕ ರಾಜ್ ಕುಂದ್ರಾರನ್ನ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಆರೋಪಿಯನ್ನು ಜುಲೈ 27ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿತ್ತು. ಇಂದು ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಆಶ್ಲೀಲ ಸಿನಿಮಾಗಳ ನಿರ್ಮಾಣ ಸಂಬಂಧ ಫೆಬ್ರವರಿ 2021ರಂದು ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ಸಣ್ಣ ಸುಳಿವು ಆಧರಿಸಿ ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಸದ್ಯ ಕೆಲವರು ಜಾಮೀನು ಪಡೆದು ಹೊರ ಬಂದಿದ್ದಾರೆ. ಇದನ್ನೂ ಓದಿ: ಅದು ಅಶ್ಲೀಲ ಸಿನಿಮಾ ಅಲ್ಲ, ಸಾಫ್ಟ್ ಪೋರ್ನ್: ರಾಜ್ ಕುಂದ್ರಾ ಮಾಜಿ ಉದ್ಯೋಗಿ ತನ್ವೀರ್

The post ರಾಜ್ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನ appeared first on Public TV.

Source: publictv.in

Source link