ಮೈದುಂಬಿ ಹರಿಯುತ್ತಿರುವ ತುಂಗಭದ್ರೆ-ಪ್ರವಾಹದ ಆತಂಕದಲ್ಲಿ ಜನ

ರಾಯಚೂರು: ಜಿಲ್ಲೆಯಲ್ಲಿ ಒಂದೆಡೆ ಕೃಷ್ಣಾ ನದಿ ಪ್ರವಾಹ ತಗ್ಗುತ್ತಿದ್ದಂತೆ ತುಂಗಭದ್ರೆಯ ಪ್ರವಾಹ ಭೀತಿ ಆರಂಭವಾಗಿದೆ. ತುಂಗಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನ ನದಿಗೆ ಹರಿಸುತ್ತಿರುವುದರಿಂದ ನದಿ ಪಾತ್ರದ ಜಮೀನುಗಳಿಗೆ ನೀರು ನುಗ್ಗಿದ್ದು, ಗ್ರಾಮಗಳ ಜನ ಪ್ರವಾಹದ ಆತಂಕದಲ್ಲಿದ್ದಾರೆ.

ಮಾನ್ವಿ ತಾಲೂಕಿನ ರಾಜೊಳ್ಳಿಬಂಡಾ ತಿರುವು ಯೋಜನೆ ಆಣೆಕಟ್ಟು ತುಂಬಿ ಹರಿಯುತ್ತಿದ್ದು, ಎಲ್ಲಾ ಗೇಟ್‍ಗಳ ಮೂಲಕ ನೀರನ್ನ ಕಾಲುವೆಗೆ ಹರಿಬಿಡಲಾಗುತ್ತಿದೆ. ಆಣೆಕಟ್ಟು ತುಂಬಿದ್ದರಿಂದ ತಡೆ ಗೋಡೆ ಮೇಲಿನಿಂದ ಧುಮ್ಮಿಕ್ಕಿ ಹರಿಯುತ್ತಿರುವ ನೀರು ಆಂಧ್ರಪ್ರದೇಶಕ್ಕೆ ಸೇರುತ್ತಿದೆ. ನೀರು ಉಕ್ಕಿ ಹರಿಯುದನ್ನ ನೋಡಲು ಜನ ತಂಡೋಪತಂಡವಾಗಿ ಇಲ್ಲಿಗೆ ಬರುತ್ತಿದ್ದಾರೆ. ಇದನ್ನೂ ಓದಿ: ಟ್ರಾಫಿಕ್ ಪೊಲೀಸ್ ಮನೆಯಲ್ಲಿ ಚಿನ್ನದ ಶೌಚಾಲಯ

ರಾಯಚೂರು ತಾಲೂಕಿನ ಎಲೆಬಿಚ್ಚಾಲಿ ಗ್ರಾಮ ಪ್ರವಾಹ ಭೀತಿ ಎದುರಿಸುತ್ತಿದ್ದು, ಇಲ್ಲಿನ ಶ್ರೀಗುರು ರಾಘವೇಂದ್ರ ಸ್ವಾಮಿಗಳ ಜಪದ ಕಟ್ಟೆ, ಸ್ವಪ್ನ ವೃಂದಾವನ ಮುಳುಗಡೆಯಾಗಿದೆ. ಸದ್ಯ ಜಲಾಶಯಕ್ಕೆ 1,12,855 ಕ್ಯೂಸೆಕ್ಸ್ ಒಳಹರಿವು ಇದ್ದು, 68,482 ಕ್ಯೂಸೆಕ್ಸ್ ಹೊರಹರಿವು ಇದೆ.

blank

The post ಮೈದುಂಬಿ ಹರಿಯುತ್ತಿರುವ ತುಂಗಭದ್ರೆ-ಪ್ರವಾಹದ ಆತಂಕದಲ್ಲಿ ಜನ appeared first on Public TV.

Source: publictv.in

Source link