Big Breaking: ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಆಯ್ಕೆ

Big Breaking: ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಆಯ್ಕೆ

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆ ಆಗಿದ್ದಾರೆ. ಈ ಮೂಲಕ ರಾಜ್ಯದ ನೂತನ ಸಿಎಂ ಯಾರಾಗ್ತಾರೆ ಅನ್ನೋ ತೀವ್ರ ಕುತೂಹಲಕ್ಕೆ ತೆರೆ ಬಿದ್ದಿದೆ. ಲಿಂಗಾಯತ ಸಮುದಾಯದವರೇ ಆದ ಬಸವರಾಜ್​ ಬೊಮ್ಮಾಯಿ ಅವರಿಗೆ ಬಿಜೆಪಿ ಮಣೆ ಹಾಕಿದೆ. ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ನಿನ್ನೆ ರಾಜೀನಾಮೆ ನೀಡಿದ್ದರು. ಬಿಎಸ್​ವೈ ನಂತರ ಯಾರು ಮುಂದಿನ ಸಾರಥಿ ಅನ್ನೋ ಪ್ರಶ್ನೆ ಎದ್ದಿತ್ತು. ಪ್ರಮುಖವಾಗಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಾಸಕ ಅರವಿಂದ್ ಬೆಲ್ಲದ್ ಸೇರಿದಂತೆ ಹಲವರು ಸಿಎಂ ರೇಸ್​​ನಲ್ಲಿ ಇದ್ದಾರೆ ಎನ್ನಲಾಗಿತ್ತು.

ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವ ಉದ್ದೇಶದಿಂದ ಬಿಜೆಪಿ ಹೈಕಮಾಂಡ್​ನ ನಿಯೋಗ ರಾಜ್ಯಕ್ಕೆ ಆಗಮಿಸಿತ್ತು. ಇದೀಗ ಬಿಜೆಪಿ ಹೈಕಮಾಂಡ್​​ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದು, ಅಂತಿಮವಾಗಿ ಬಸವರಾಜ್ ಬೊಮ್ಮಾಯಿ ಅವರನ್ನ ಸಿಎಂ ಅಭ್ಯರ್ಥಿಯನ್ನಾಗಿ ಮಾಡಿದೆ. ಹೈಕಮಾಂಡ್ ಸೂಚನೆಯಂತೆ ಇಂದು ಸಂಜೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದಿಂದ ಬೊಮ್ಮಾಯಿ ಅವರನ್ನ ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿಯೊಂದೇ ಹೊರ ಬೀಳಬೇಕಿದೆ.

The post Big Breaking: ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಆಯ್ಕೆ appeared first on News First Kannada.

Source: newsfirstlive.com

Source link