ಸಿಎಂ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ಆಯ್ಕೆ ಅಧಿಕೃತ; ನಾಳೆ ಮಧ್ಯಾಹ್ನ ಪ್ರಮಾಣ ವಚನ 

ಸಿಎಂ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ಆಯ್ಕೆ ಅಧಿಕೃತ; ನಾಳೆ ಮಧ್ಯಾಹ್ನ ಪ್ರಮಾಣ ವಚನ 

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರನ್ನ ಅಧಿಕೃತವಾಗಿ ಆಯ್ಕೆ ಆಗಿದ್ದಾರೆ. ಇಂದು ಸಂಜೆ ನಡೆದ ಬಿಜೆಪಿ ಶಾಸಕಾಂಗ ಸಭೆ ಬಳಿಕ ಬೊಮ್ಮಾಯಿ ಹೆಸರನ್ನ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಅದರಂತೆ ನಾಳೆ ಮಧ್ಯಾಹ್ನ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ

ಈ ಮೂಲಕ ರಾಜ್ಯದ ನೂತನ ಸಿಎಂ ಯಾರಾಗ್ತಾರೆ ಅನ್ನೋ ತೀವ್ರ ಕುತೂಹಲಕ್ಕೆ ತೆರೆ ಬಿದ್ದಿದೆ. ಲಿಂಗಾಯತ ಸಮುದಾಯದವರೇ ಆದ ಬಸವರಾಜ್​ ಬೊಮ್ಮಾಯಿ ಅವರಿಗೆ ಬಿಜೆಪಿ ಮಣೆ ಹಾಕಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ನಿನ್ನೆ ರಾಜೀನಾಮೆ ನೀಡಿದ್ದರು. ಬಿಎಸ್​ವೈ ನಂತರ ಯಾರು ಮುಂದಿನ ಸಾರಥಿ ಅನ್ನೋ ಪ್ರಶ್ನೆ ಎದ್ದಿತ್ತು. ಪ್ರಮುಖವಾಗಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಾಸಕ ಅರವಿಂದ್ ಬೆಲ್ಲದ್ ಸೇರಿದಂತೆ ಹಲವರು ಸಿಎಂ ರೇಸ್​​ನಲ್ಲಿ ಇದ್ದಾರೆ ಎನ್ನಲಾಗಿತ್ತು.

ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವ ಉದ್ದೇಶದಿಂದ ಬಿಜೆಪಿ ಹೈಕಮಾಂಡ್​ನ ನಿಯೋಗ ರಾಜ್ಯಕ್ಕೆ ಆಗಮಿಸಿತ್ತು. ಇದೀಗ ಬಿಜೆಪಿ ಹೈಕಮಾಂಡ್​​ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದು, ಅಂತಿಮವಾಗಿ ಬಸವರಾಜ್ ಬೊಮ್ಮಾಯಿ ಅವರನ್ನ ಸಿಎಂ ಅಭ್ಯರ್ಥಿಯನ್ನಾಗಿ ಮಾಡಿದೆ. ಹೈಕಮಾಂಡ್ ಸೂಚನೆಯಂತೆ ಇಂದು ಸಂಜೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದಿಂದ ಬೊಮ್ಮಾಯಿ ಅವರನ್ನ ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

The post ಸಿಎಂ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ಆಯ್ಕೆ ಅಧಿಕೃತ; ನಾಳೆ ಮಧ್ಯಾಹ್ನ ಪ್ರಮಾಣ ವಚನ  appeared first on News First Kannada.

Source: newsfirstlive.com

Source link