ಎಲ್ಲರಿಗೂ ನನ್ನ ಧನ್ಯವಾದಗಳು – ನೂತನ ಸಿಎಂ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ

– ಯಡಿಯೂರಪ್ಪನವರ ನಿರೀಕ್ಷೆಗಳನ್ನು ಈಡೇರಿಸುತ್ತೇನೆ 

ಬೆಂಗಳೂರು: ನನ್ನನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ ನೀಡಿದರು.

ಶಾಸಕಾಂಗ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಬೊಮ್ಮಾಯಿ, ನಾನು ಎಲ್ಲರನ್ನು ಒಗ್ಗೂಡಿಸಿಕೊಂಡು, ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಜನಪರ ಆಡಳಿತ ನೀಡುತ್ತೇನೆ ಎಂದರು.

ರಾಜ್ಯದಲ್ಲಿ ಕೋವಿಡ್ ಸಂಕಷ್ಟ ಮತ್ತು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಪರಿಹರಿಸುವ ಕೆಲಸ ಮಾಡುತ್ತೇನೆ. ಹೈಕಮಾಂಡ್ ಯಾವುದೇ ಷರತ್ತು ವಿಧಿಸಿಲ್ಲ. ಯಡಿಯೂರಪ್ಪನವರ ನಿರೀಕ್ಷೆಗಳನ್ನು ಈಡೇರಿಸುತ್ತೇನೆ ಎಂದು ಭರವಸೆ ನೀಡಿದರು.

The post ಎಲ್ಲರಿಗೂ ನನ್ನ ಧನ್ಯವಾದಗಳು – ನೂತನ ಸಿಎಂ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ appeared first on Public TV.

Source: publictv.in

Source link