ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ ಆಗಿ ಪ್ರಮಾಣ ವಚನ -ಬೊಮ್ಮಾಯಿ ಹೇಳಿಕೆ

ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ ಆಗಿ ಪ್ರಮಾಣ ವಚನ -ಬೊಮ್ಮಾಯಿ ಹೇಳಿಕೆ

ಬೆಂಗಳೂರು: ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತೇನೆ ಅಂತಾ ನಿಯೋಜಿತ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಬೊಮ್ಮಾಯಿ ಅವರನ್ನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದ ಬೆನ್ನಲ್ಲೇ, ಬಿಜೆಪಿ ನಿಯೋಗ ರಾಜ್ಯಪಾಲರನ್ನ ಭೇಟಿ ಮಾಡಿತ್ತು. ಬೊಮ್ಮಾಯಿ ನೇತೃತ್ವದ ನಿಯೋಗ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡುವಂತೆ ರಾಜ್ಯಪಾಲರ ಬಳಿ ಮನವಿ ಮಾಡಿಕೊಂಡಿತು.

ಬಳಿಕ ಹೊರ ಬಂದು ಮಾತನಾಡಿದ ಬೊಮ್ಮಾಯಿ.. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಹಾಗೂ ನನ್ನ ರಾಜಕೀಯ ಗುರು ಬಿಎಸ್​ ಯಡಿಯೂರಪ್ಪ ಅವರ ಆಶೀರ್ವಾದದಿಂದ ನನ್ನನ್ನ ಶಾಸಕಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಅದರಂತೆ ಇಂದು ರಾಜ್ಯಪಾಲರನ್ನ ಭೇಟಿ ಮಾಡಿ ಸರ್ಕಾರ ರಚನೆಗೆ ಅವಕಾಶ ಕೇಳಲಾಗಿದೆ ಎಂದರು.

ಅದರಂತೆ ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡುತ್ತೇನೆ. ನಾಳೆ ನಾನು ಮಾತ್ರ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತೇನೆ ಎಂದು ಇದೇ ವೇಳೆ ಅವರು ತಿಳಿಸಿದರು.

The post ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ ಆಗಿ ಪ್ರಮಾಣ ವಚನ -ಬೊಮ್ಮಾಯಿ ಹೇಳಿಕೆ appeared first on News First Kannada.

Source: newsfirstlive.com

Source link