ಸಮಸ್ಯೆಗಳ ಸುಳಿಯಲ್ಲಿರುವ ರಾಜ್ಯಕ್ಕೆ ಪರಿಹಾರಾತ್ಮಕ ಕೆಲಸ ಮಾಡಿ -ಬೊಮ್ಮಾಯಿಗೆ ಹೆಚ್​ಡಿಕೆ ಶುಭಾಶಯ

ಸಮಸ್ಯೆಗಳ ಸುಳಿಯಲ್ಲಿರುವ ರಾಜ್ಯಕ್ಕೆ ಪರಿಹಾರಾತ್ಮಕ ಕೆಲಸ ಮಾಡಿ -ಬೊಮ್ಮಾಯಿಗೆ ಹೆಚ್​ಡಿಕೆ ಶುಭಾಶಯ

ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರನ್ನ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆ ಅಭಿನಂದನೆಗಳ ಸುರಿಮಳೆ ಹರಿದು ಬರುತ್ತಿದೆ. ಇದೀಗ, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕೂಡ ಅಭಿನಂದಿಸಿದ್ದಾರೆ.

ಇದನ್ನೂ ಓದಿ: ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ ಆಗಿ ಪ್ರಮಾಣ ವಚನ -ಬೊಮ್ಮಾಯಿ ಹೇಳಿಕೆ

‘‘ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾದ ಬಸವರಾಜ್ ಬೊಮ್ಮಾಯಿ ಅವರಿಗೆ ಶುಭಾಶಯಗಳು. ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ರಾಜ್ಯಕ್ಕೆ ಪರಿಹಾರಾತ್ಮಕವಾಗಿ ಕೆಲಸ ಮಾಡುವಿರೆಂದು ನಿರೀಕ್ಷಿಸುವೆ. ನೀರಾವರಿ ವಿಚಾರಗಳಲ್ಲಿ ತಮಗೆ ಜ್ಞಾನವುಂಟು. ಅಣೆಕಟ್ಟು ನಿರ್ಮಾಣದಂಥ ವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳತ್ತ ತಾವು ಗಮನಹರಿಸುವಿರೆಂದು ಭಾವಿಸುವೆ.’’ ಎಂದು ಟ್ವಿಟರ್​ ಖಾತೆಯಲ್ಲಿ ಬರೆದು ಶುಭ ಕೋರಿದ್ದಾರೆ.

ಇದನ್ನೂ ಓದಿ: ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಆಯ್ಕೆ

 

The post ಸಮಸ್ಯೆಗಳ ಸುಳಿಯಲ್ಲಿರುವ ರಾಜ್ಯಕ್ಕೆ ಪರಿಹಾರಾತ್ಮಕ ಕೆಲಸ ಮಾಡಿ -ಬೊಮ್ಮಾಯಿಗೆ ಹೆಚ್​ಡಿಕೆ ಶುಭಾಶಯ appeared first on News First Kannada.

Source: newsfirstlive.com

Source link