ನೂತನ ಸಿಎಂ ಬೊಮ್ಮಾಯಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆಎಸ್ ಅಭಿನಂದನೆ

ನೂತನ ಸಿಎಂ ಬೊಮ್ಮಾಯಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆಎಸ್ ಅಭಿನಂದನೆ

ಬೆಂಗಳೂರು: ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಇಂದು ಸಂಜೆ ನಡೆದ ಬಿಜೆಪಿ ಶಾಸಕಾಂಗ ಸಭೆ ಬಳಿಕ ಬೊಮ್ಮಾಯಿ ಹೆಸರನ್ನ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅಭಿನಂದನೆ ಸಲ್ಲಿಸಿದ್ದಾರೆ.

‘ರಾಜ್ಯಕ್ಕೆ ನೂತನ ಸಿಎಂ ಆಗಿ ಆಯ್ಕೆಯಾಗಿರುವ ಬಸವರಾಜ್ ಬೊಮ್ಮಾಯಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಈಗ ಮತ್ತೆ ಆಡಳಿತದತ್ತ ಗಮನ ಹರಿಸಲಾಗುವುದು ಎಂದು ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಆಶಿಸುತ್ತಿದೆ’ ಎಂದು ತಮ್ಮ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

 

The post ನೂತನ ಸಿಎಂ ಬೊಮ್ಮಾಯಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆಎಸ್ ಅಭಿನಂದನೆ appeared first on News First Kannada.

Source: newsfirstlive.com

Source link