ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ

ಬೆಂಗಳೂರು: ಬಸವರಾಜ ಬೊಮ್ಮಾಯಿ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬೊಮ್ಮಾಯಿ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರತಿಜ್ಞಾವಿಧಿ ಸಮಾರಂಭಕ್ಕೂ ಮೊದಲು ಬಾಲಬ್ರೂಯಿ ಆಂಜನೇಯ ದೇವಾಲಯ ಮತ್ತು ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಬೊಮ್ಮಾಯಿ ಭೇಟಿ ನೀಡಿದ್ದರು. ಇನ್ನೊಂದು ವಾರದಲ್ಲಿ ನೂತನ ಸಂಪುಟ ಸಹ ಅಸ್ತಿತ್ವಕ್ಕೆ ಬರುವ ನಿರೀಕ್ಷೆ ಇದೆ.

ಮಾಧ್ಯಮಗಳ ಜೊತೆ ಮಾತನಾಡಿದ್ದ ಬೊಮ್ಮಾಯಿ, ನಾನು ಮುಖ್ಯಮಂತ್ರಿ ಸ್ಪರ್ಧೆಯಲ್ಲಿ ಇರಲಿಲ್ಲ. ಪಕ್ಷದ ಹೈಕಮಾಂಡ್ ನಾಯಕರು ನನ್ನನ್ನು ಗುರುತಿಸಿ ಅವಕಾಶ ನೀಡಿದ್ದಾರೆ. ನಾನು ದೆಹಲಿಗೆ ಹೋಗಲಿಲ್ಲ. ಅವರೇ ಗುರುತಿಸಿ ಜವಾಬ್ದಾರಿ ನೀಡಿದ್ದಾರೆ. ಹಿರಿಯರ ಮಾರ್ಗದರ್ಶನ ಪಡೆದು ಸಂಪುಟ ರಚಿಸುತ್ತೇನೆ ಎಂದು ಹೇಳಿದ್ದಾರೆ.

The post ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ appeared first on Public TV.

Source: publictv.in

Source link