ರಾಜ್ಯದ 30 ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ

ರಾಜ್ಯದ 30 ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ 30 ನೇ ಮುಖ್ಯಮಂತ್ರಿಯಾಗಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋತ್ ಪ್ರಮಾಣವಚನ ಭೋದಿಸಿದ್ದಾರೆ.

ಕನ್ಯಾ ಲಗ್ನದ ಶುಭ ಘಳಿಗೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿಯವರ ಪದಗ್ರಹಣ ಕಾರ್ಯಕ್ರಮಕ್ಕೆ ಕೇಂದ್ರದ ನಾಯಕರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ., ರಾಜ್ಯ ನಾಯಕರು ಹಾಗೂ ಕುಟುಂಬಸ್ಥರು ಸಾಕ್ಷಿಯಾಗಿದ್ದಾರೆ.

ಬಿ.ಎಸ್. ಯಡಿಯೂರಪ್ಪ ನಂತರ ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬ ಚರ್ಚೆ ತಾರಕಕ್ಕೇರಿ ಹಲವು ನಾಯಕರ ಹೆಸರುಗಳು ಮುನ್ನೆಲೆಗೆ ಬಂದಿದ್ದವು.. ಕೊನೆಘಳಿಗೆಯಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ಬಸವರಾಜ ಬೊಮ್ಮಾಯಿ ಅವರ ಹೆಸರು ಸೂಚಿಸಿದ ಹಿನ್ನೆಲೆ ಬೊಮ್ಮಾಯಿ ಆಯ್ಕೆಗೆ ಪಕ್ಷದ ನಾಯಕರೂ ಒಪ್ಪಿಗೆ ಸೂಚಿಸಿದ್ದಾರೆ. ಈ ಹಿನ್ನೆಲೆ ಇಂದು ಬೊಮ್ಮಾಯಿ ಅಧಿಕೃತವಾಗಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

The post ರಾಜ್ಯದ 30 ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ appeared first on News First Kannada.

Source: newsfirstlive.com

Source link