ಇನ್ಮೇಲೆ ನಾನು ಸೂಪರ್ ಸಿಎಂ ಅಲ್ಲ: ವಿಜಯೇಂದ್ರ

ಬೆಂಗಳೂರು: ಇನ್ಮುಂದೆ ನಾನು ಸೂಪರ್ ಸಿಎಂ ಅಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಸಿಎಂ ಬದಲಾಗಿದ್ದರಿಂದ ನಾನು ಸೂಪರ್ ಸಿಎಂ ಟ್ಯಾಗ್ ನಿಂದ ಹೊರಗೆ ಬಂದಿರೋದಕ್ಕೆ ಸಂತೋಷವಾಗಿದ್ದೇನೆ. ಮುಂದೆ ಪಕ್ಷದಲ್ಲಿ ಅಥವಾ ಸರ್ಕಾರದೊಳಗೆ ಕೆಲಸ ಮಾಡಬೇಕು ಎಂಬುದನ್ನ ಹೈಕಮಾಂಡ್ ನಿರ್ಧರಿಸಲಿದೆ. 17 ಜನರು ಪಕ್ಷ ಮತ್ತು ಯಡಿಯೂರಪ್ಪನವರನ್ನು ನಂಬಿಕೊಂಡು ಬಂದವರು. ಎಲ್ಲರನ್ನು ಪಕ್ಷ ಒಳ್ಳೆಯ ರೀತಿಯಲ್ಲಿ ನಡೆದುಕೊಳ್ಳುತ್ತೆ ಅನ್ನೋ ವಿಶ್ವಾಸವಿದೆ ಎಂದು ತಿಳಿಸಿದರು.

ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಿದ್ದು ಕೇಂದ್ರದ ನಾಯಕತ್ವ. ಹಾಗಾಗಿ ಎಲ್ಲರ ವಿಶ್ವಾಸ ತೆಗೆದುಕೊಂಡು ಸರ್ವಾನುಮತದಿಂದ ಬೊಮ್ಮಾಯಿ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ ಎಂದರು. ಇದನ್ನೂ ಓದಿ: ಯಾರಿಗೆ ಕೊಕ್ ನೀಡ್ತಾರೆ ಗೊತ್ತಿಲ್ಲ, ನಾನ್ ಮಾತ್ರ ಸಂಪುಟದಲ್ಲಿ ಇರ್ತೀನಿ: ಎಂಟಿಬಿ ನಾಗರಾಜ್

ಇದೇ ವೇಳೆ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಲಸಿಗರು ಈಗ ನಮ್ಮ ಪಕ್ಷದವರು. ಯಾರಿಗೂ ಅನ್ಯಾಯ ಅಗದಂತೆ ಪಕ್ಷ ನಿರ್ಧಾರ ಮಾಡುತ್ತದೆ. ಯಾರ್ ಮಂತ್ರಿ ಆಗಬೇಕು ಎನ್ನುವುದನ್ನು ಸಿಎಂ ನಿರ್ಧಾರ ಮಾಡುತ್ತಾರೆ. ಸಾಮಾಜಿಕ ನ್ಯಾಯ, ಭೌಗೋಳಿಕ ಎಲ್ಲವನ್ನು ನೋಡಿ ಮಂತ್ರಿ ಸ್ಥಾನ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಸಿಎಂ ಪಟ್ಟಕ್ಕಾಗಿ ಮತ್ತೆ ಗಡೇ ದುರ್ಗಾದೇವಿ ಮೊರೆಹೋದ ಶ್ರೀರಾಮುಲು

The post ಇನ್ಮೇಲೆ ನಾನು ಸೂಪರ್ ಸಿಎಂ ಅಲ್ಲ: ವಿಜಯೇಂದ್ರ appeared first on Public TV.

Source: publictv.in

Source link