ರೈತರ ಮಕ್ಕಳಿಗೆ ಶಿಷ್ಯ ವೇತನ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಪ್ರಮಾಣವಚನ ಸ್ವೀಕರಿಸಿದ ನಂತರ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ ನೂತನ ಮುಖ್ಯಮಂತ್ರಿಗಳು ತಮ್ಮ ಕೊಠಡಿಯಲ್ಲಿ ಸರಳವಾಗಿ ಪೂಜೆ ಸಲ್ಲಿಸಿದರು. ನಂತರ ಅಧಿಕಾರಿಗಳ ಜೊತೆ ಕಡತ ಪರಿಶೀಲನೆ ನಡೆಸಿದರು. ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಹೊಸ ಯೋಜನೆಗಳನ್ನು ಘೋಷಣೆ ಮಾಡಿದರು.

ಸಿಎಂ ಬೊಮ್ಮಾಯಿ ಘೋಷಣೆಗಳು:
* ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಒಂದು ಸಾವಿರ ಕೋಟಿ ವೆಚ್ಚದಲ್ಲಿ ಹೊಸ ಶಿಷ್ಯ ವೇತನ ಯೋಜನೆ.
* ಸಂಧ್ಯಾ ಸುರಕ್ಷಾ ಯೋಜನೆಯಲ್ಲಿ ಮಾಸಾಶನ 1,000 ದಿಂದ 1,200 ರೂ.ಗೆ ಹೆಚ್ಚಳ. ಈ ಯೋಜನೆಗೆ 863 ಕೋಟಿ ಹೆಚ್ಚುವರಿ ವೆಚ್ಚ ಆಗಲಿದೆ.
* ಅಂಗವಿಕಲರ ವೇತನ 600 ರೂ. ಯಿಂದ 800 ರೂ.ಗೆ ಹೆಚ್ಚಳ
* ವಿಧವಾ ವೇತನ 800 ರೂ.ಗೆ ಹೆಚ್ಚಳ. 17.25 ಲಕ್ಷ ಫಲಾನುಭವಿಗಳಿಗೆ ಲಾಭ ಸಿಗಲಿದೆ.

ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬೊಮ್ಮಾಯಿ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರತಿಜ್ಞಾವಿಧಿ ಸಮಾರಂಭಕ್ಕೂ ಮೊದಲು ಬಾಲಬ್ರೂಯಿ ಆಂಜನೇಯ ದೇವಾಲಯ ಮತ್ತು ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಬೊಮ್ಮಾಯಿ ಭೇಟಿ ನೀಡಿದ್ದರು. ಇನ್ನೊಂದು ವಾರದಲ್ಲಿ ನೂತನ ಸಂಪುಟ ಸಹ ಅಸ್ತಿತ್ವಕ್ಕೆ ಬರುವ ನಿರೀಕ್ಷೆ ಇದೆ.

The post ರೈತರ ಮಕ್ಕಳಿಗೆ ಶಿಷ್ಯ ವೇತನ: ಸಿಎಂ ಬೊಮ್ಮಾಯಿ ಘೋಷಣೆ appeared first on Public TV.

Source: publictv.in

Source link