2023ಕ್ಕೆ ವಿಜಯೇಂದ್ರರನ್ನ ಸಿಎಂ ಮಾಡಲು ಬೊಮ್ಮಾಯಿ ಆಯ್ಕೆ: ಆನಂದ್ ಆಸ್ನೋಟಿಕರ್

– ಇನ್ಮುಂದೆ ಯಡಿಯೂರಪ್ಪ ಸೂಪರ್ ಸಿಎಂ

ಕಾರವಾರ: ಬಸವರಾಜ ಬೊಮ್ಮಾಯಿರವರನ್ನು ಸಿಎಂ ಮಾಡಿರುವುದು ಭವಿಷ್ಯದಲ್ಲಿ ವಿಜಯೇಂದ್ರರನ್ನ ಸಿಎಂ ಮಾಡುವುದಕ್ಕಾಗಿ ಎಂದು ಕಾರವಾರದಲ್ಲಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಹೇಳಿದ್ದಾರೆ.

ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು. ಬೊಮ್ಮಾಯಿ ಆಯ್ಕೆಯ ಮೂಲಕ ಬಿ.ಎಸ್ ಯಡಿಯೂರಪ್ಪನವರು ಪಕ್ಷದಲ್ಲಿ ಹಿಡಿತ ಸಾಧಿಸಿದ್ದಾರೆ. ಸೂಪರ್ ಸಿಎಂ ಆಗಿ ಯಡಿಯೂರಪ್ಪ ಇನ್ನು ಮುಂದೆ ರಾಜ್ಯದಲ್ಲಿ ಅಧಿಕಾರ ಚಲಾಯಿಸುತ್ತಾರೆ. 2023ಕ್ಕೆ ವಿಜಯೇಂದ್ರ ಸಿಎಂ ಮಾಡಲು ಬೊಮ್ಮಾಯಿಯನ್ನ ಈಗ ಸಿಎಂ ಮಾಡಿದ್ದಾರೆ. ಯತ್ನಾಳ್ ಹಾಗೂ ಯೋಗೇಶ್ವರ್ ಐದಾರು ತಿಂಗಳಿನಿಂದ ಯಡಿಯೂರಪ್ಪನವರ ವಿರುದ್ಧ ಮಾತನಾಡುತ್ತಿದ್ದರು. ಯತ್ನಾಳ್ ಬೋನಿನಲ್ಲಿ ಇದ್ದ ಮಂಗನ ರೀತಿ ಕೂಗಾಟ ಮಾಡಿದರು ಏನು ಮಾಡಿಕೊಳ್ಳಲಾಗಲಿಲ್ಲ. ಬಿಜೆಪಿ ಶಿಸ್ತಿನ ಪಕ್ಷ ಆಗಿದಿದ್ದರೇ ಅವರಿಬ್ಬರನ್ನ ಮಂತ್ರಿ ಮಾಡಬಾರದು ಎಂದು ಆಗ್ರಹಿಸಿದರು.

ಇನ್ನು ಬಸವರಾಜ್ ಬೊಮ್ಮಾಯಿಯನ್ನು ಸಿಎಂ ಆಗಿ ಬಿಜೆಪಿ ಮಾಡಿರುವುದು ಒಳ್ಳೆಯ ಆಯ್ಕೆ. ಇದರಿಂದ ಬಿಜೆಪಿಗೆ ಭವಿಷ್ಯದಲ್ಲಿ ಲಾಭವಾಗಲಿದೆ. ರಾಜ್ಯಕ್ಕೆ ಒಳ್ಳೆಯ ದಿನ ಬರುತ್ತದೆ. ಈಗಿನ ಸರ್ಕಾರ ಬೆಳವಣಿಗೆ ಮುಂದೆ ಜೆಡಿಎಸ್ ಗೆ ಒಳ್ಳೆಯದಾಗಲಿದೆ. ಮುಂದಿನ ಬಾರಿ ಸರ್ಕಾರ ರಚನೆ ವೇಳೆ ಕುಮಾರಸ್ವಾಮಿ ದೊಡ್ಡ ರೋಲ್ ತೆಗೆದುಕೊಳ್ಳುತ್ತಾರೆ ಎಂದರು. ಇದನ್ನೂ ಓದಿ: ಇನ್ಮೇಲೆ ನಾನು ಸೂಪರ್ ಸಿಎಂ ಅಲ್ಲ: ವಿಜಯೇಂದ್ರ

The post 2023ಕ್ಕೆ ವಿಜಯೇಂದ್ರರನ್ನ ಸಿಎಂ ಮಾಡಲು ಬೊಮ್ಮಾಯಿ ಆಯ್ಕೆ: ಆನಂದ್ ಆಸ್ನೋಟಿಕರ್ appeared first on Public TV.

Source: publictv.in

Source link