ಬೊಮ್ಮಾಯಿ ಸಂಪುಟದಲ್ಲಿ ಸಚಿವನಾಗೋದು ನನಗೆ ಇಷ್ಟವಿಲ್ಲ: ಜಗದೀಶ್ ಶೆಟ್ಟರ್

ಬೆಂಗಳೂರು: ಈ ಬಾರಿಯ ಸಂಪುಟದಲ್ಲಿ ಸೇರ್ಪಡೆಯಾಗಬಾರದೆಂಬ ನಿರ್ಧಾರ ಮಾಡಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶೆಟ್ಟರ್, ಈ ಹಿಂದೆ ಯಡಿಯೂರಪ್ಪನವರ ನಾಯಕತ್ವದಲ್ಲಿ ಕೆಲಸ ಮಾಡಿದ್ದೇನೆ. ಮಾಜಿ ಸಿಎಂ ಆಗಿದ್ದರೂ ಕಳೆದ ಬಾರಿ ಯಡಿಯೂರಪ್ಪನವರ ಸರ್ಕಾರದಲ್ಲಿ ಸಚಿವನಾಗಿದ್ದೆ. ಇದು ನನ್ನ ವೈಯಕ್ತಿಯ ನಿರ್ಧಾರವಾಗಿದ್ದು, ಹೈಕಮಾಂಡ್ ನಿಂದ ಯಾವುದೇ ಸಂದೇಶ ಬಂದಿಲ್ಲ. ನನ್ನ ಅಭಿಪ್ರಾಯವನ್ನು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಹೈಕಮಾಂಡ್ ಗೆ ತಂದಿದ್ದೇನೆ ಎಂದು ತಿಳಿಸಿದರು.

ಹೊಸ ಸಿಎಂ ಬೊಮ್ಮಾಯಿ ಅವರ ಸಂಪುಟ ರಚನೆ ಪ್ರಕ್ರಿಯೆ ಆರಂಭಗೊಂಡಿದೆ. ಆದು ಯಾವಾಗಾ ಪೂರ್ಣಗೊಳ್ಳುತ್ತೋ ಗೊತ್ತಿಲ್ಲ. ನಾನೊಬ್ಬ ಹಿರಿಯ ನಾಯಕನಾಗಿದ್ದರಿಂದ ಬೊಮ್ಮಾಯಿ ಸಂಪುಟ ಸೇರ್ಪಡೆಯಾಗದಿರಲು ತೀರ್ಮಾನಿಸಿದ್ದೇನೆ. ಬೇರೆ ಯಾವ ಹುದ್ದೆಗೂ ನಾನು ಆಕಾಂಕ್ಷಿಯಲ್ಲ. ಒಂದು ವೇಳೆ ಪಕ್ಷದ ಹೈಕಮಾಂಡ್ ಯಾವುದಾದ್ರೂ ಕೆಲಸ ನೀಡಿದ್ರೆ ಮಾಡುತ್ತೇನೆ ಎಂದರು.

The post ಬೊಮ್ಮಾಯಿ ಸಂಪುಟದಲ್ಲಿ ಸಚಿವನಾಗೋದು ನನಗೆ ಇಷ್ಟವಿಲ್ಲ: ಜಗದೀಶ್ ಶೆಟ್ಟರ್ appeared first on Public TV.

Source: publictv.in

Source link