ನನ್ನ ಸಾಧನೆಗೆ ಮತ್ತೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ -ಶ್ರೀನಿವಾಸ ಪೂಜಾರಿ ವಿಶ್ವಾಸ

ನನ್ನ ಸಾಧನೆಗೆ ಮತ್ತೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ -ಶ್ರೀನಿವಾಸ ಪೂಜಾರಿ ವಿಶ್ವಾಸ

ದಕ್ಷಿಣ ಕನ್ನಡ: ನಾನು ಸಚಿವನಾಗಿ ಎರಡೂ ಖಾತೆಗಳಲ್ಲೂ ಒಳ್ಳೆಯ ಕೆಲಸ ಮಾಡಿದ್ದೇನೆ. ಹಾಗಾಗಿ ನನಗೆ ಮತ್ತೆ ಸಚಿವ ಸ್ಥಾನ ಸಿಗುವ ನಿರೀಕ್ಷೆಯಿದೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೊಮ್ಮಾಯಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬೆನ್ನಲ್ಲೇ, ಬಿಎಸ್​ವೈ ಸಂಪುಟದಲ್ಲಿದ್ದ ಕೆಲವು ಹಿರಿಯ ನಾಯಕರಿಗೆ ಕೋಕ್ ನೀಡಲಾಗುತ್ತಿದೆ ಅಂತಾ ಹೇಳಲಾಗಿದೆ. ಈ ಸಂಬಂಧ ಮಾಧ್ಯಮಗಳ ಜೊತೆ ಪ್ರತಿಕ್ರಿಯಿಸಿದ ಶ್ರೀನಿವಾಸ ಪೂಜಾರಿ.. ಹೈಕಮಾಂಡ್ ನನ್ನ ಸಾಧನೆಯನ್ನ ಗಮನಿಸಿ ಮತ್ತೆ ಸಚಿವ ಸ್ಥಾನ ನೀಡುವ ನಿರೀಕ್ಷೆಯಿದೆ ಎಂದರು.

ಆದರೆ ಮಂತ್ರಿ ಮಂಡಲದಲ್ಲಿ ನಾನಿರಬೇಕು ಅನ್ನೋದನ್ನ ನಿರ್ಧಾರ ಮಾಡೋದು ನಾನಲ್ಲ. ನಮ್ಮ ನೂತನ ಸಿಎಂ, ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ಯಡಿಯೂರಪ್ಪ ಹಾಗೂ ಹೈಕಮಾಂಡ್ ತೀರ್ಮಾನ ಮಾಡ್ತಾರೆ ಎಂದರು.

The post ನನ್ನ ಸಾಧನೆಗೆ ಮತ್ತೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ -ಶ್ರೀನಿವಾಸ ಪೂಜಾರಿ ವಿಶ್ವಾಸ appeared first on News First Kannada.

Source: newsfirstlive.com

Source link