‘ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಎಂ ಆಗಿದ್ದೇನೆ, ಆಶೀರ್ವಾದ ಮಾಡಿ’ ಎಂದ್ರಂತೆ ಬೊಮ್ಮಾಯಿ

‘ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಎಂ ಆಗಿದ್ದೇನೆ, ಆಶೀರ್ವಾದ ಮಾಡಿ’ ಎಂದ್ರಂತೆ ಬೊಮ್ಮಾಯಿ

ಬೆಳಗಾವಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿರನ್ನು ಸರ್ವಾನುಮತದಿಂದ ಆಯ್ಕೆ ಮಾಡಿರುವುದು ಬಿಜೆಪಿಯ ಒಗ್ಗಟ್ಟು ಮತ್ತು ದೂರದೃಷ್ಟಿ ತೋರಿಸುತ್ತದೆ ಎಂದು ರಂಭಾಪುರಿ ಜಗದ್ಗುರು ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಳಗಾವಿಯ ಹುಕ್ಕೇರಿ ಹಿರೇಮಠದಲ್ಲಿ ಮಾತಾಡಿದ ರಂಭಾಪುರಿ ಜಗದ್ಗುರು, ಹಲವು ಮಹತ್ತರ ಬೆಳವಣಿಗೆಗಳ ನಡುವೆ ಬಸವರಾಜ ಬೊಮ್ಮಾಯಿರನ್ನು ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವುದು ಬಿಜೆಪಿ ದೂರದೃಷ್ಟಿಗೆ ಸಾಕ್ಷಿ ಎಂದಿದ್ದಾರೆ.

ಇತ್ತೀಚೆಗೆ ಬಿ.ಎಸ್​ ಯಡಿಯೂರಪ್ಪ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಯ್ಕೆಗಾಗಿ ಬಿಜೆಪಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಆಗಮಿಸಿದ್ದರು. ಸಿಎಂ ರೇಸ್‌ನಲ್ಲಿ ನಾಲ್ಕೈದು ಜನರ ಹೆಸರು ಕೇಳಿ ಬಂದಿತ್ತು. ಈ ವೇಳೆ ಎಲ್ಲರೂ ಬಸವರಾಜ ಬೊಮ್ಮಾಯಿರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಇದು ಬಿಜೆಪಿ ಪಕ್ಷದ ಒಗ್ಗಟ್ಟು ತೋರಿಸುತ್ತದೆ ಎಂದು ಹೊಗಳಿದರು.

blank

ಹೀಗೆ ಮುಂದುವರಿದ ರಂಭಾಪುರಿ ಜಗದ್ಗುರು, ಬಿಎಸ್‌ವೈ ಪದತ್ಯಾಗದಿಂದ‌ ಬಹುಸಂಖ್ಯಾತ ವೀರಶೈವ ಲಿಂಗಾಯತ ಸಮುದಾಯ ಬೇಸರದಲ್ಲಿದ್ದರು. ಅದನ್ನ ಸರಿದೂಗಿಸಲು ಮತ್ತೋರ್ವ ವೀರಶೈವ ಲಿಂಗಾಯತ ಸಮುದಾಯದ ನಾಯಕನ ನೇಮಕ ಮಾಡಲಾಗಿದೆ. ಬಸವರಾಜ್ ಬೊಮ್ಮಾಯಿ ಚಾಣಾಕ್ಷ, ರಾಜಕಾರಣಿ, ದಕ್ಷ ಆಡಳಿತಗಾರ, ಯಾವುದೇ ಆರೋಪಗಳಿಲ್ಲ ಎಂದು ಹೇಳಿದರು.

ಆಶೀರ್ವಾದ ಮಾಡಿ ಎಂದ ಬೊಮ್ಮಾಯಿ
ಬಿಜೆಪಿ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತಗೆದುಕೊಂಡು ಹೋಗುವ ಸಾಮರ್ಥ್ಯವಿದೆ. ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಬಸವರಾಜ್ ಬೊಮ್ಮಾಯಿ ಕರೆ ಮಾಡಿದ್ದರು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದೀನಿ ಆಶೀರ್ವಾದ ಮಾಡಿ ಎಂದರು. ಪೀಠದದಿಂದ ಎಂದ ಬೊಮ್ಮಾಯಿ ಮೇಲೆ ಆಶೀರ್ವಾದ ಇದ್ದೇ ಇರುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ಕರ್ನಾಟಕ ಇತಿಹಾಸದಲ್ಲೇ ನನ್ನ ಆಡಳಿತ ಜನಪರವಾಗಿರಲಿದೆ- ಸಿಎಂ ಬೊಮ್ಮಾಯಿ

ಬೆಳಗಾವಿಯ ಸುವರ್ಣಸೌಧದಲ್ಲಿ ಎರಡು ವರ್ಷಗಳಿಂದ ಅಧಿವೇಶನ ಆಗಿಲ್ಲ. ರಾಜಧಾನಿ ಬೆಂಗಳೂರಿನ ಕಾರ್ಯಾಲಯಗಳನ್ನು ಸುವರ್ಣಸೌಧಕ್ಕೆ ಸ್ಥಳಾಂತರ ಮಾಡಬೇಕು. ಅಭಿವೃದ್ಧಿ ಕಾರ್ಯಕುಂಠಿತ ಹೊಂದಿದ್ದು, ಅದಕ್ಕೆ ವೇಗ ತರಬೇಕು. ಕಾವೇರಿ ಕೊಡುವ ಬೆಂಬಲ ಈ ಭಾಗದ ರೈತ ಸಮುದಾಯಕ್ಕೆ ಒಳ್ಳೆಯದಾಗಲು ನೀರಿನ ಸೌಲಭ್ಯ ಸಿಗಬೇಕು. ಬಿಎಸ್‌ವೈ ದೂರದೃಷ್ಟಿ, ಸಂಕಲ್ಪಿತ ಯೋಜನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಬೊಮ್ಮಾಯಿ ಕೆಲಸ ಮಾಡಲಿ ಎಂದು ಆಶೀರ್ವಾದಿಸಿದರು.

The post ‘ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಎಂ ಆಗಿದ್ದೇನೆ, ಆಶೀರ್ವಾದ ಮಾಡಿ’ ಎಂದ್ರಂತೆ ಬೊಮ್ಮಾಯಿ appeared first on News First Kannada.

Source: newsfirstlive.com

Source link