ಇಂದು ನೂತನ ಸಿಎಂ ಬೊಮ್ಮಾಯಿ ಉತ್ತರ ಕನ್ನಡ ಪ್ರವಾಸ

ಇಂದು ನೂತನ ಸಿಎಂ ಬೊಮ್ಮಾಯಿ ಉತ್ತರ ಕನ್ನಡ ಪ್ರವಾಸ

ಬೆಂಗಳೂರು: ನೂತನ ಸಿಎಂ ಬಸವರಾಜ ಬೊಮ್ಮಾಯಿ ಇಂದು ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ.

ನೆರೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಿಎಂ ಪರಿಶೀಲನೆ ನಡೆಸಲಿದ್ದಾರೆ. ಇಂದು ಬೆಳಗ್ಗೆ 9:30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳಲಿರುವ ಸಿಎಂ‌ ಬೊಮ್ಮಾಯಿ‌, ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ಯಲ್ಲಾಪುರ, ಕಾರವಾರ, ಅಂಕೋಲಾಗೆ ತೆರಳಿ ಪ್ರವಾಹ ಪರಿಸ್ಥಿತಿ ಪರಿಶೀಲನೆ ನಡೆಸಲಿದ್ದಾರೆ. ಅಲ್ಲದೇ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಕೈಗೊಂಡಿರುವ ಪರಿಹಾರ ಕಾರ್ಯಗಳ ಕುರಿತಂತೆ ಶಾಸಕರು, ಸಂಸದರು, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ: ಮಾಜಿ ಸಿಎಂ ಪುತ್ರನಿಗೆ ಪಟ್ಟ ಕಟ್ಟಿದ್ದೇಕೆ ಬಿಜೆಪಿ? ಕೇಸರಿ ಹೈಕಮಾಂಡ್ ನೀಡಿದ ಸಂದೇಶ ಏನು?

The post ಇಂದು ನೂತನ ಸಿಎಂ ಬೊಮ್ಮಾಯಿ ಉತ್ತರ ಕನ್ನಡ ಪ್ರವಾಸ appeared first on News First Kannada.

Source: newsfirstlive.com

Source link