ಒಳ್ಳೆಯ ಆಡಳಿತ ನೀಡುವಂತೆ ಮೋದಿ ಸಲಹೆ ನೀಡಿದ್ದಾರೆ -ಸಿಎಂ ಬೊಮ್ಮಾಯಿ

ಒಳ್ಳೆಯ ಆಡಳಿತ ನೀಡುವಂತೆ ಮೋದಿ ಸಲಹೆ ನೀಡಿದ್ದಾರೆ -ಸಿಎಂ ಬೊಮ್ಮಾಯಿ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಅಪಾರ ಹಾನಿಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಮೊದಲು ಜಿಲ್ಲೆಯಲ್ಲಿ ಪರಿಶೀಲನೆ ‌ನಡೆಸಿ ಆಮೇಲೆ ಪರಿಹಾರದ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಪ್ರಧಾನಿ ಮೋದಿ ಸೇರಿದಂತೆ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಕೇಂದ್ರ ನಾಯಕರನ್ನು ಭೇಟಿ ಮಾಡಲು ಸಮಯ ಕೇಳಿದ್ದೇನೆ. ಆದರೆ ನಾಳೆ ಬೆಳಗ್ಗೆ ದೆಹಲಿಗೆ ಹೋಗುವ ಯೋಚನೆ ಇದೆ.

ನಿನ್ನೆ ಪ್ರಧಾನಿ ಮೋದಿ ಜೊತೆಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಪ್ರಧಾನಿ ಮೋದಿ ಅವರು ಒಳ್ಳೆಯ ಆಡಳಿತ ನೀಡುವಂತೆ ಸಲಹೆ ನೀಡಿದ್ದಾರೆ ಎಂದರು. ಇದೇ ವೇಳೆ ಸಂಪುಟ ರಚನೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಸಂಪುಟ ರಚನೆ ಈ ಸಲದ ದೆಹಲಿ ಭೇಟಿ ವೇಳೆ ಫೈನಲ್ ಆಗೋದಿಲ್ಲ. ಈ ಭೇಟಿಯಲ್ಲಿ ಸಂಪುಟ ರಚನೆ ಬಗ್ಗೆ ವರಿಷ್ಠರ ಜತೆ ಚರ್ಚೆ ಮಾಡಲ್ಲ. ಮತ್ತೊಂದು ಭೇಟಿ ವೇಳೆ ಸಂಪುಟ ರಚನೆ ಕುರಿತು ಚರ್ಚೆ ಮಾಡ್ತೇನೆ. ಈ ಬಾರಿಯ ಭೇಟಿಯ ವೇಳೆ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿರುವ ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಸ್ಪಷ್ಟಪಡಿಸಿದರು.

The post ಒಳ್ಳೆಯ ಆಡಳಿತ ನೀಡುವಂತೆ ಮೋದಿ ಸಲಹೆ ನೀಡಿದ್ದಾರೆ -ಸಿಎಂ ಬೊಮ್ಮಾಯಿ appeared first on News First Kannada.

Source: newsfirstlive.com

Source link