ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಿ ಇಂದಿಗೆ ಒಂದು ವರ್ಷ;ಪ್ರಧಾನಿ ಮೋದಿ ಹೇಳಿದ್ದೇನು?

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಿ ಇಂದಿಗೆ ಒಂದು ವರ್ಷ;ಪ್ರಧಾನಿ ಮೋದಿ ಹೇಳಿದ್ದೇನು?

ನವದೆಹಲಿ: “ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಿ ಇಂದಿಗೆ ಒಂದು ವರ್ಷ. ಮಾರಕ ಕೊರೋನಾ ಲಾಕ್​ಡೌನ್​​ ನಡುವೆಯೂ ಹೊಸ ಶಿಕ್ಷಣ ನೀತಿಯನ್ನು ಯಶಸ್ವಿಯಾಗಿ ಜಾರಿಗೊಳಿಸಲು ಶ್ರಮಿಸಿದ ಎಲ್ಲರಿಗೂ ಕೇಂದ್ರ ಸರ್ಕಾರದ ಪರವಾಗಿ ಅಭಿನಂದನೆಗಳು” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕಳೆದ ವರ್ಷ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವಿಡಿಯೋ ಕಾನ್ಫರೆನ್ಸ್​ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಮಾತಾಡಿದರು. ಈ ವೇಳೆ ವಿದ್ಯಾರ್ಥಿಗಳು, ಪೋಷಕರು ಮತ್ತು ಶೈಕ್ಷಣಿಕ ಸಿಬ್ಬಂದಿ ಸಹಾಯದಿಂದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸರಿಯಾಗಿ ಜಾರಿಗೊಳಿಸಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು. ಜತೆಗೆ ಇದಕ್ಕಾಗಿ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.

ಇದನ್ನೂ ಓದಿ: BigBreaking: ವೈದ್ಯಕೀಯ ಶಿಕ್ಷಣದಲ್ಲಿ OBCಗೆ ಶೇ.27, ಬಡವರಿಗೆ ಶೇ.10 ಮೀಸಲಾತಿ

ಇನ್ನು, ಪ್ರಧಾನಿ ನರೇಂದ್ರ ಮೋದಿಯವರು ಉನ್ನತ ಶಿಕ್ಷಣಕ್ಕೆ ಪ್ರವೇಶ ಮತ್ತು ನಿರ್ಗಮನಕ್ಕೆ ವಿವಿಧ ಆಯ್ಕೆಗಳನ್ನು ನೀಡುವ ಶೈಕ್ಷಣಿಕ ಬ್ಯಾಂಕ್​ ಆಫ್​ ಕ್ರೆಡಿಟ್ ಅ​ನ್ನು ಉದ್ಘಾಟಿಸಿದರು. ಜತೆಗೆ ಪ್ರಾದೇಶಿಕ ಭಾಷೆಗಳಲ್ಲಿ ಪ್ರಥಮ ವರ್ಷದ ಎಂಜಿನಿಯರಿಂಗ್ ಕಾರ್ಯಕ್ರಮಗಳ ಕುರಿತಾದ ಮಾರ್ಗಸೂಚಿಗಳನ್ನೂ ಬಿಡುಗಡೆಗೊಳಿಸಿದರು.

The post ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಿ ಇಂದಿಗೆ ಒಂದು ವರ್ಷ;ಪ್ರಧಾನಿ ಮೋದಿ ಹೇಳಿದ್ದೇನು? appeared first on News First Kannada.

Source: newsfirstlive.com

Source link