ಬೊಮ್ಮಾಯಿ ದೆಹಲಿ ಪ್ರವಾಸಕ್ಕೆ ಮುಹೂರ್ತ ಫಿಕ್ಸ್; ಸಚಿವಾಕಾಂಕ್ಷಿಗಳಿಂದ ಹೆಚ್ಚಿದ ಲಾಬಿ

ಬೊಮ್ಮಾಯಿ ದೆಹಲಿ ಪ್ರವಾಸಕ್ಕೆ ಮುಹೂರ್ತ ಫಿಕ್ಸ್; ಸಚಿವಾಕಾಂಕ್ಷಿಗಳಿಂದ ಹೆಚ್ಚಿದ ಲಾಬಿ

ಬೆಂಗಳೂರು: ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿ ರಾಜ್ಯದ ಆಡಳಿತದ ಜಾವಾಬ್ದಾರಿ ಪಡ್ಕೊಂಡಿರುವ ಬಸವರಾಜ್ ಬೊಮ್ಮಾಯಿ ಅವರು ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಎರಡು ದಿನಗಳ ದೆಹಲಿ ಪ್ರವಾಸದಲ್ಲಿ ಸಿಎಂ ಬೊಮ್ಮಾಯಿ ಅವರು ಹೈಕಮಾಂಡ್ ನಾಯಕರನ್ನ ಭೇಟಿಯಾಗಿ ಆಶೀರ್ವಾದ ಪಡೆಯಲಿದ್ದಾರೆ. ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಮಾಡಲು ಅನುಮತಿ ಪಡೆಯಲಿದ್ದಾರೆ.

ಮೂಲಗಳ ಪ್ರಕಾರ ಬೊಮ್ಮಾಯಿ ಅವರು ನಾಳೆ ಬೆಳಗ್ಗೆ 6 ಗಂಟೆಗೆ ದೆಹಲಿಯತ್ತ ಪ್ರಯಾಣ ಬೆಳಸಲಿದ್ದಾರೆ. ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರೀಯ ನಾಯಕರ ಭೇಟಿ ಮಾಡಿ ಮಧ್ಯಾಹ್ನ ಕೇಂದ್ರ ಸಚಿವರು ಹಾಗೂ ರಾಜ್ಯ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ. ನಾಳೆ ರಾತ್ರಿ ನವದೆಹಲಿಯ ಕರ್ನಾಟಕ ಭವನದಲ್ಲಿ ಬೊಮ್ಮಾಯಿ ವಾಸ್ತವ್ಯ ಹೂಡಿ ಶನಿವಾರ ಬೆಂಗಳೂರಿಗೆ ವಾಪಸ್ ಬರಲಿದ್ದಾರೆ.

The post ಬೊಮ್ಮಾಯಿ ದೆಹಲಿ ಪ್ರವಾಸಕ್ಕೆ ಮುಹೂರ್ತ ಫಿಕ್ಸ್; ಸಚಿವಾಕಾಂಕ್ಷಿಗಳಿಂದ ಹೆಚ್ಚಿದ ಲಾಬಿ appeared first on News First Kannada.

Source: newsfirstlive.com

Source link