ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಮೇಲೆ ದುಷ್ಕರ್ಮಿಗಳಿಂದ ಕೊಲೆಗೆ ಯತ್ನ

ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಮೇಲೆ ದುಷ್ಕರ್ಮಿಗಳಿಂದ ಕೊಲೆಗೆ ಯತ್ನ

ಬೆಂಗಳೂರು: ಕ್ಯಾಮ್ಸ್ (ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳ ಆಡಳಿತ ಮಂಡಳಿಯ ಒಕ್ಕೂಟ)ನ ಕಾರ್ಯದರ್ಶಿ ಶಶಿಕುಮಾರ್ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿ ಕೊಲೆಗೆ ಯತ್ನಿಸಿರುವ ಆರೋಪ ಕೇಳಿಬಂದಿದೆ.

ಇಂದು ರಾತ್ರಿ 9 ಗಂಟೆಯ ಸುಮಾರಿಗೆ ಮನೆಯ ಬಳಿಯೇ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮೂಲಗಳ ಪ್ರಕಾರ ನಾಲ್ವರು ದುಷ್ಕರ್ಮಿಗಳು ಹಲ್ಲೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ದುಷ್ಕರ್ಮಿಗಳ ಕೃತ್ಯದಿಂದಾಗಿ ಶಶಿಕುಮಾರ್ ಅವರ ತೊಡೆ ಹಾಗೂ ಕೈಗೆ ಸಣ್ಣಪುಟ್ಟ ಗಾಯಗಳಾಗಿವೆ.

ವಿಚಾರ ಗೊತ್ತಾಗ್ತಿದ್ದಂತೆ ಸ್ಥಳೀಯ ಪೊಲೀಸರಿಂದ ಶಶಿಕುಮಾರ್ ಮನೆಗೆ ಭದ್ರತೆ ಒದಗಿಸಿದ್ದಾರೆ. ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಶಶಿಕುಮಾರ್ ಪ್ರಕರಣವನ್ನ ದಾಖಲಿಸಿದ್ದಾರೆ.

The post ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಮೇಲೆ ದುಷ್ಕರ್ಮಿಗಳಿಂದ ಕೊಲೆಗೆ ಯತ್ನ appeared first on News First Kannada.

Source: newsfirstlive.com

Source link